ಹಾಸ್ಟೆಲ್ ಗಳಲ್ಲಿಮನೆ ವಾತಾವರಣ
ವಿಕ ಸುದ್ದಿಲೋಕ ವಿಜಯಪುರ
‘‘ವಸತಿ ನಿಲಯಗಳು ಮಕ್ಕಳ ಭವಿಷ್ಯ ರೂಪಿಸುವ ಕಲಿಕಾ ಕೇಂದ್ರಗಳಾಗಿವೆ. ಈ ಕೇಂದ್ರಗಳಲ್ಲಿಮನೆ ವಾತಾವರಣ ನಿರ್ಮಿಸುತ್ತಿದ್ದೇವೆ,’’ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಹೇಳಿದರು.
ನಗರದ ಡಾ.ಬಿ.ಆರ್ .ಅಂಬೇಡ್ಕರ್ ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿಹಮ್ಮಿಕೊಂಡಿದ್ದ 2025-26ನೇ ಸಾಲಿನ ವಸತಿ ನಿಲಯ ವಾಸ್ತವ್ಯ ಹಾಗೂ ನಾನಾ ವಿನೂತನ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾನಾ ಸ್ಪರ್ಧೆಗಳಲ್ಲಿಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿದರು. ಸಿಂದಗಿ ತಾಲೂಕು ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ಬಸವನಬಾಗೇವಾಡಿ ತಾಲೂಕು ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ಸಹಾಯಕ ನಿರ್ದೇಶಕ ಉಮೇಶ ಲಮಾಣಿ, ನಿರಾಶ್ರಿತರ ಪರಿಹಾರ ಕೇಂದ್ರದ ಪದ್ಮಜಾ ಪಾಟೀಲ, ಟಿ.ಬಿ.ಮಂಟೂರ, ಅರವಿಂದ ಲಂಬು, ಕೆ.ಬಿ.ಕೋರೆ, ಲೆಕ್ಕ ಅಧೀಕ್ಷಕ ಎಂ.ಟಿ.ಬಿರಾದಾರ, ಸತೀಶ ಸಜ್ಜನ, ಸದಾನಂದ ಬಡಿಗೇರ ಇದ್ದರು.
ಹಾಸ್ಟೆಲ್ -ಬಿಜೆಪಿ7
ವಿಜಯಪುರದ ಡಾ.ಬಿ.ಆರ್ .ಅಂಬೇಡ್ಕರ್ ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿಜಿಲ್ಲಾಡಳಿತದಿಂದ ನಡೆದ ವಸತಿ ನಿಲಯ ವಾಸ್ತವ್ಯ ಹಾಗೂ ನಾನಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿಜಿಲ್ಲಾಧಿಕಾರಿ ಡಾ.ಆನಂದ ಕೆ. ಮಾತನಾಡಿದರು.

