ಗರ್ಭಕಂಠ ಕ್ಯಾನ್ಸರ್ ತಡೆಗೆ ಸಹಕರಿಸಿ

Contributed bymaheshmadahalli.vk@gmail.com|Vijaya Karnataka

ಗುಂಡ್ಲುಪೇಟೆಯಲ್ಲಿ ಹೆಣ್ಣು ಮಕ್ಕಳ ಗರ್ಭಕಂಠ ಕ್ಯಾನ್ಸರ್ ತಡೆಗೆ ಎಚ್‌ಪಿವಿ ಲಸಿಕಾ ಅಭಿಯಾನ ಆರಂಭವಾಗಿದೆ. 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗುತ್ತಿದೆ. ದೇಶದಾದ್ಯಂತ ಕೇಂದ್ರ ಸರ್ಕಾರದಿಂದ ಲಸಿಕೆ ಲಭ್ಯವಿದೆ. ತಾಲೂಕಿನಲ್ಲಿ 1400 ಹೆಣ್ಣು ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯವಿದ್ದು, ಹತ್ತಿರದ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆಯಲು ತಿಳಿಸಲಾಗಿದೆ.

hpv vaccine a shield against cervical cancer for girls

ಹೆಣ್ಣು ಮಕ್ಕಳಿಗೆ ಎಚ್ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ

ವಿಕ ಸುದ್ದಿಲೋಕ ಗುಂಡ್ಲುಪೇಟೆ

ಕಡ್ಡಾಯವಾಗಿ ಎಚ್ ಪಿವಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಹೆಣ್ಣು ಮಕ್ಕಳಲ್ಲಿಕಂಡು ಬರುತ್ತಿರುವ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಸಹಕರಿಸಬೇಕು ಎಂದು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲೀಂ ಪಾಷಾ ಸಲಹೆ ನೀಡಿದರು.

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ14 ವಷÜರ್ ಮೇಲ್ಪಟ್ಟ 15 ವಷÜರ್ ದೊಳಗಿನ ಹೆಣ್ಣು ಮಕ್ಕಳಿಗೆ ಎಚ್ ಪಿವಿ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

‘‘ಎಚ್ ಪಿವಿ ಲಸಿಕೆಯನ್ನು ಉಚಿತವಾಗಿ ದೇಶದಾದ್ಯಂತ ಇರುವ ಆಸ್ಪತ್ರೆಗಳಿಗೆ ಕೇಂದ್ರ ಸರಕಾರ ನೀಡುತ್ತಿದೆ. ಇದರ ಸದ್ಭಳಕೆಯನ್ನು ಹೆಣ್ಣು ಮಕ್ಕಳು ಪಡೆದುಕೊಳ್ಳಿ,’’ ಎಂದು ಸಲಹೆ ನೀಡಿದರು.

‘‘ತಾಲೂಕಿನಲ್ಲಿ14 ರಿಂದ 15 ವಷÜರ್ ದ 1400 ಹೆಣ್ಣು ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಲಸಿಕೆ ತಾಲೂಕಿನ ಎಲ್ಲಾಸರಕಾರಿ ಆಸ್ಪತ್ರೆಗಳಲ್ಲಿಲಭ್ಯವಿರುತ್ತದೆ. ಲಸಿಕೆ ಅಭಿಯಾನ ಹಂತ ಹಂತವಾಗಿ ಅನುಷ್ಟಾನಗೊಳ್ಳುತ್ತಿದ್ದು, ಹತ್ತಿರದ ಆಸ್ಪತ್ರೆಗೆ ಹೋಗಿ ಎಚ್ ಪಿವಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಗರ್ಭಕಂಠದ ಕ್ಯಾನ್ಸರ್ ನಿಂದ ಮುಕ್ತವಾಗಿರಿ,’’ ಎಂದು ಸಲಹೆ ನೀಡಿದರು. ಸಾರ್ವಜನಿಕರು, ಪೋಷÜಕರು, ಶಾಲಾ ಮುಖ್ಯಸ್ಥರು ಹಾಗೂ ತಾಲೂಕು ಆಡಳಿತ ಸಹಕಾರ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಹತ್ತಿರ ಮಾಹಿತಿ ಪಡೆಯಬಹುದು,’’ ಎಂದು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಧಿಕಾರಿ ಡಾ.ತ್ರಿವೇಣಿ, ನೇನೆಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಹಮ್ಮದ್ ಸೌದ್ , ಮಕ್ಕಳ ತಜ್ಞ ಡಾ.ವೇಣುಗೋಪಾಲ್ , ಆರೋಗ್ಯ ಇಲಾಖೆಯ ರಾಘವೇಂದ್ರ, ತುಳಸಿಮಣಿ, ಜ್ಯೋತಿ, ವಿನಾಯಕ, ಗಣೇಶ, ಪ್ರಶಾಂತ್ , ಚೇತನ್ , ಮನೋಹರ್ , ಪುಟ್ಟರಾಜು, ತೇಜಾ, ಕಾವ್ಯ, ಲೀಲಾ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.

1103ಜಿಪಿಟಿ01

ಗುಂಡ್ಲುಪೇಟೆ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿಹೆಚ್ .ಪಿ.ವಿ ಲಸಿಕಾ ಅಭಿಯಾನಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಚಾಲನೆ ನೀಡಿದರು.