ಅರ್ಜಿ ಆಹ್ವಾನ

Contributed bysanthoshaanampalli7@gmail.com|Vijaya Karnataka

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾ.30ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 7619281523 ಸಂಖ್ಯೆಗೆ ಸಂಪರ್ಕಿಸಬಹುದು. ಇದು ಉದ್ಯೋಗಾವಕಾಶವನ್ನು ಒದಗಿಸುತ್ತದೆ.

recruitment of assistants at anganwadi centers by the department of women and child development

ಅರ್ಜಿ ಆಹ್ವಾನ

ರಾಯಚೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ ಸಿರವಾರ ತಾಲೂಕಿನ ಅಂಗನವಾಡಿ ಕೇಂದ್ರ ಸಂಖ್ಯೆ 12 ಹಾಗೂ ಅತ್ತನೂರು ಅಂಗನವಾಡಿ ಕೇಂದ್ರ ಸಂಖ್ಯೆ 5ರಲ್ಲಿಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ, ಅರ್ಜಿ ಸಲ್ಲಿಸಲು ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು. ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಆಸಕ್ತರು ಮಾ.30ರೊಳಗೆ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೊ. 7619281523ಗೆ ಸಂಪರ್ಕಿಸಬಹುದು.