ಹೊಸದಿಲ್ಲಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ ಕಂಬಳ ಆಯೋಜನೆ ಪ್ರಶ್ನಿಸಿ ‘ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ ಮೆಂಟ್ ಆಫ್ ಅನಿಮಲ್ ’(ಪೆಟಾ) ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸದೆ. ಆ ಮೂಲಕ ರಾಜ್ಯದ ಯಾವುದೇ ಭಾಗದಲ್ಲಿಕಂಬಳ ನಡೆಸಲು ಹಸಿರು ನಿಶಾನೆ ತೋರಿದೆ. ಈ ಸಂಬಂಧ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು, ‘‘ಕಂಬಳ ಕ್ರೀಡೆಯನ್ನು ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು,’’ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.

