ಯುವಕನಿಗೆ 20 ವರ್ಷ ಜೈಲು

Contributed byaatish.kannale@timesgroup.com|Vijaya Karnataka

ಶಿವಮೊಗ್ಗದಲ್ಲಿ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 23 ವರ್ಷದ ಯುವಕನಿಗೆ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದೆ. ಶಿರಾಳಕೊಪ್ಪದ ಯುವಕನ ವಿರುದ್ಧ ಪೋಕ್ಸೋ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಗಳಡಿ ಪ್ರಕರಣ ದಾಖಲಾಗಿತ್ತು. ಶಿಕಾರಿಪುರ ಡಿವೈಎಸ್‌ಪಿ ಕೆ.ವಿ.ಕೇಶವ್‌ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ನ್ಯಾಯಾಧೀಶ ನಿಂಗನಗೌಡ ಪಾಟೀಲ್‌ ತೀರ್ಪು ನೀಡಿದ್ದಾರೆ.

young man sentenced to 20 years in prison for sexual assault under the pretense of marriage

ಯುವಕನಿಗೆ 20 ವರ್ಷ ಜೈಲು

ವಿಕ ಸುದ್ದಿಲೋಕ ಶಿವಮೊಗ್ಗ

ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ವಾಸ ಮತ್ತು 1 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಶಿರಾಳಕೊಪ್ಪದ ಯುವಕ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಶಿರಾಳಕೊಪ್ಪ ಠಾಣೆಯಲ್ಲಿದೂರು ನೀಡಿದ್ದು, ಅದರ ಆಧಾರದ ಮೇಲೆ ಪೋಕ್ಸೊ ಕಾಯಿದೆ ಮತ್ತು ಎಸ್ ಸಿ ಮತ್ತು ಎಸ್ ಟಿ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಶಿಕಾರಿಪುರ ಡಿವೈಎಸ್ ಪಿ ಕೆ.ವಿ.ಕೇಶವ್ ಅವರು ನ್ಯಾಯಾಲಯಕ್ಕೆ ಚಾಜ್ ರ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್ ಸಿ 1) ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ತೀರ್ಪು ನೀಡಿದ್ದಾರೆ. ಸರಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.