ಕಾಳಸಂತೆಯಲ್ಲಿಸಿಲಿಂಡರ್ ಮಾರಾಟ: ಏಜೆನ್ಸಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ವಿಕ ಸುದ್ದಿಲೋಕ ಗದಗ
ಗದಗ-ಬೆಟಗೇರಿ ನಗರದಲ್ಲಿಗ್ರಾಹಕರಿಗೆ ನೀಡಬೇಕಾದ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ಕಾಳಸಂತೆಯಲ್ಲಿಮಾರಾಟ ಮಾಡುತ್ತಿರುವ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಸ್ಲಂ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಮಿತಿ ಅಧ್ಯಕ್ಷ ಇಮ್ತಿಯಾಜ್ ಮಾನ್ವಿ ಮಾತನಾಡಿ, ಕೆಲವು ಗ್ಯಾಸ್ ಏಜೆನ್ಸಿಗಳು ಗ್ರಾಹಕರ ಹೆಸರಿಗೆ ಬುಕ್ ಆಗಿರುವ ಸಿಲಿಂಡರ್ ಗಳನ್ನು ಬ್ಲ್ಯಾಕ್ ಮಾರ್ಕೆಟ್ ನಲ್ಲಿಹೆಚ್ಚುವರಿ ದರಕ್ಕೆ ಮಾರಾಟ ಮಾಡುತ್ತಿರುವುದಾಗಿ ಆರೋಪಿಸಿದರು. ಒಂದು ಸಿಲಿಂಡರ್ ಗೆ 400ರಿಂದ 500 ರೂ.ವರೆಗೆ ಹೆಚ್ಚುವರಿ ಹಣ ಪಡೆದು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.
ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ ಮಾತನಾಡಿ, ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿಗ್ರಾಹಕರಿಗೆ ಸರಿಯಾದ ಮಾಹಿತಿ ನೀಡುವುದಿಲ್ಲ. ಕರೆ ಮಾಡಿದರೂ ಪ್ರತಿಕ್ರಿಯೆ ನೀಡದೇ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ದೂರಿದರು.
ಮಹಿಳಾ ಸಮಿತಿ ಅಧ್ಯಕ್ಷೆ ಪರವೀನಬಾನು ಹವಾಲ್ದಾರ ಮಾತನಾಡಿ, ಅಡುಗೆ ಅನಿಲ ದರ ಏರಿಕೆಯಿಂದ ಮಧ್ಯಮ ವರ್ಗ ಹಾಗೂ ದುಡಿಯುವ ಜನರ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ ಎಂದು ಹೇಳಿದರು. ಗ್ಯಾಸ್ ಏಜೆನ್ಸಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಪರವಾನಿಗೆ ರದ್ದುಪಡಿಸಬೇಕು. ಇಲ್ಲವಾದರೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಅಪರ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿ, ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿಸ್ಲಂ ಸಮಿತಿಯ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
12ಜಿಡಿಜಿ1-ಜಿಲ್ಲಾಸ್ಲಂ ಜನಾಂದೋಲನ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಮಾನ್ವಿ ಕಾಳುಸಂತೆಯಲ್ಲಿಎಲ್ ಪಿಜಿ ಸಿಲಿಂಡರ್ ಮಾರಾಟ ತಡೆಗಟ್ಟಲು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

