ಪಿಸಾರಹಟ್ಟಿ ನೀರಿನ ಸಮಸ್ಯೆಗೆ ಪರಿಹಾರ
ಮಾಯಕೊಂಡ: ದಾವಣಗೆರೆ ತಾಲೂಕಿನ ನೇರ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಕಟ್ಟೆ ಹಾಗೂ ಪಿಸಾರಹಟ್ಟಿ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್ , ಗ್ರಾಮಗಳಲ್ಲಿಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದರು.
ಭೇಟಿಯ ಸಂದರ್ಭದಲ್ಲಿಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಜಿಪಂ ಸಿಇಒ, ನೀರಿನ ಕೊರತೆಯಿಂದ ಉಂಟಾಗಿದ್ದ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಸ್ಥಳದಲ್ಲಿಯೇ ಅಗತ್ಯ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿದರು. ಈ ಸಂದರ್ಭದಲ್ಲಿಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.
--
13ಎಂವೈಕೆ 1
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಪಿಸಾರಹಟ್ಟಿಗೆ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಮತ್ತು ಅಧಿಕಾರಿಗಳು ಭೇಟಿ ನೀಡಿರುವುದು.

