ಭಾಷಾ ನೀತಿ ಅನುಷ್ಠಾನದಲ್ಲಿಜನರು ಸಕ್ರಿಯರಾಗಲಿ

Contributed byadarshkodi15@gmail.com|Vijaya Karnataka

ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತಿ ಸಮಿತಿ ಸದಸ್ಯರೊಂದಿಗೆ ತಹಸೀಲ್ದಾರ್‌ ಸಭೆ ನಡೆಸಿದರು. ರಾಜ್ಯದ ಎಲ್ಲ ಹಂತಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಶಯ ಹೊಂದಿದೆ. ಭಾಷಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜನರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮಾ.31ರಂದು ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು.

public participation is essential in implementing kannada language policy

ಭಾಷಾ ನೀತಿ ಅನುಷ್ಠಾನದಲ್ಲಿಜನರು ಸಕ್ರಿಯರಾಗಲಿ

(( ಕನ್ನಡ ಜಾಗೃತಿ ಸಮಿತಿ ಸದಸ್ಯರೊಂದಿಗೆ ತಹಸೀಲ್ದಾರ್ ಸಭೆ))

ವಿಕ ಸುದ್ದಿಲೋಕ ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ನಗರದಲ್ಲಿರುವ ತಾಲೂಕು ಕಚೇರಿಯಲ್ಲಿತಹಸೀಲ್ದಾರ್ ಡಾ.ಮಲ್ಲಪ್ಪ ಕೆ ಯರಗೋಳ ಅವರ ನೇತೃತ್ವದಲ್ಲಿಕನ್ನಡ ಜಾಗೃತಿ ಸಮಿತಿ ಸದಸ್ಯರು, ತಾಲೂಕಿನ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಹಸೀಲ್ದಾರ್ ಅವರು, ರಾಜ್ಯ ಸರಕಾರ ರಾಜ್ಯದ ಎಲ್ಲಜಿಲ್ಲೆಗಳಲ್ಲಿನೂತನವಾಗಿ ಕನ್ನಡ ಜಾಗೃತಿ ಸಮಿತಿ ಸದಸ್ಯರನ್ನು ನೇಮಕ ಮಾಡಿದೆ. ಆಡಳಿತದ ಎಲ್ಲಹಂತಗಳಲ್ಲಿಯೂ ಕನ್ನಡವನ್ನು ಕಡ್ಡಾಯವಾಗಿ ಜಾರಿಗೆ ತರಬೇಕೆಂಬುದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶಯವಾಗಿದೆ ಎಂದರು.

ರಾಜ್ಯದ ಕನ್ನಡ ಅಭಿವೃದ್ಧಿ ಕಾರ್ಯಕ್ರಮ, ಭಾಷಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಭಾಷಾ ನೀತಿಯ ಅನುಷ್ಠಾನದಲ್ಲಿಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಮಾ.3ರಂದು ಕನ್ನಡ ಜಾಗೃತಿ ಸಭೆ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಸರಕಾರಿ ಇಲಾಖೆಗಳ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು, ಕನ್ನಡ ಪರ ಸಂಘ ಸಂಸ್ಥೆಗಳು ಒಂದುಗೂಡಿ ಮಾ.31ರಂದು ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಪರಿಷತ್ ನಲ್ಲಿ‘ಕನ್ನಡ ಜಾಗೃತಿ ಸಭೆ’ ಹಮ್ಮಿಕೊಳ್ಳಲಾಗಿದೆ. ಎಲ್ಲಇಲಾಖೆ ಅಧಿಕಾರಿಗಳು ಕೈಗಾರಿಕೋದ್ಯಮಿಗಳು ಕನ್ನಡ ಪರ ಸಂಘ ಸಂಸ್ಥೆಗಳು ಹಾಗೂ ಕನ್ನಡ ಮನಸ್ಸುಗಳು ಭಾಗವಹಿಸಬೇಕೆಂದು ತಿಳಿಸಿದರು.

ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ ನಾಯಕ ಮಾತನಾಡಿ, ಕನ್ನಡ ಜಾಗೃತಿ ಸಭಾ ಕಾರ್ಯಕ್ರಮದ ಯಶಸ್ಸಿಗೆ ಕನ್ನಡ ಪರ ಮನಸ್ಸುಳ್ಳವರ ಒಂದು ಉಪಸಮಿತಿಯನ್ನು ರಚಿಸುವಂತೆ ಸಲಹೆ ನೀಡಿದರು.

ಅದರಂತೆ ತಹಸೀಲ್ದಾರ್ ಅವರನ್ನೊಳಗೊಂಡ ಉಪಸಮಿತಿಗೆ ಸದಸ್ಯರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ನಗರಸಭೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು, ಗ್ರಾಮಾಂತರ ಮತ್ತು ನಗರ ಸರ್ಕಲ್ ಇನ್ ಸ್ಪೆಕ್ಟರ್ , ನಗರಸಘೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ತ.ನ.ಪ್ರಭುದೇವ್ , ತಾಲೂಕು ಕಸಾಪ ಅಧ್ಯಕ್ಷ ಗೋವಿಂದರಾಜು, ಕಜಾಪ ಕಾರ್ಯದರ್ಶಿ ಆಂಜನೇಯ, ಸೇರಿದಂತೆ ಅನೇಕರನ್ನು ಒಳಗೊಂಡಂತೆ ಸಮಿತಿ ರಚಿಸಲಾಯಿತು.

ಈ ವೇಳೆ ಮುಖಂಡರಾದ ರಾಜಘಟ್ಟ ರವಿ, ಕೆ.ಮಹಾಲಿಂಗಯ್ಯ, ಮತ್ತಿತರರು ಹಾಜರಿದ್ದರು.

ಫೋಟೋ: 1303ವಿಕೆ2: ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿತಹಸೀಲ್ದಾರ್ ಡಾ.ಮಲ್ಲಪ್ಪ ಕೆ ಯರಗೋಳ ಅವರ ನೇತೃತ್ವದಲ್ಲಿಕನ್ನಡ ಜಾಗೃತಿ ಸಮಿತಿ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಯಿತು.