ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ (ಹೆಡ್ )

Contributed byraghukgjd1@gmail.com|Vijaya Karnataka

ಗಜೇಂದ್ರಗಡ ಮತ್ತು ರೋಣ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 18 ರಿಂದ ಆರಂಭವಾಗಲಿದೆ. ಒಟ್ಟು 14 ಕೇಂದ್ರಗಳಲ್ಲಿ 4,539 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಸಿಸಿ ಕ್ಯಾಮೆರಾ, ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಬಸ್, ಕುಡಿಯುವ ನೀರು, ಶೌಚಾಲಯದಂತಹ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

complete preparation for sslc exam anticipated exam at 14 centers in gadengadar rona taluk

* ಮಾ.18ರಿಂದ ಪರೀಕ್ಷೆ ಆರಂಭ * ಪರೀಕ್ಷೆಗೆ ಸಿಸಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ವ್ಯವಸ್ಥೆ (ಕಿಕ್ಕರ್ )

ಗಜೇಂದ್ರಗಡ, ರೋಣ ತಾಲೂಕಿನ 14 ಕೇಂದ್ರ, 4,539 ವಿದ್ಯಾರ್ಥಿಗಳ ನೋಂದಣಿ (ಬಾಕ್ಸ್ )

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ (ಹೆಡ್ )

ರಾಘವೇಂದ್ರ ಕುಲಕರ್ಣಿ ಗಜೇಂದ್ರಗಡ

2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.18 ರಿಂದ ಆರಂಭವಾಗಲಿದ್ದು, ಗಜೇಂದ್ರಗಡ, ರೋಣ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ, ತಾಲೂಕಿನ ಆಡಳಿತ ಈಗಾಗಲೇ ಸಕಲ ಸಿದ್ಧತೆ ಕೈಗೊಂಡಿದೆ. ಶಿಕ್ಷಕರ ಪೂರ್ವ ಸಭೆಗಳು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗ್ರತಿ ವಹಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಟ್ಟುನಿಟ್ಟಿನ ನಕಲು ಮುಕ್ತ, ಶಾಂತಿಯುತ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದೆ. ಪ್ರತಿ ಕೇಂದ್ರದಲ್ಲಿಸಿಸಿಟಿವಿ ಕಣ್ಗಾವಲು, ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಹಾಗೂ ಶೇ.75ಕ್ಕೂ ಹೆಚ್ಚು ಹಾಜರಾತಿ ಇರುವವರಿಗೆ ಹಾಲ್ ಟಿಕೆಟ್ ನೀಡಲಾಗುತ್ತಿದೆ. ಗಜೇಂದ್ರಗಡ, ರೋಣ ತಾಲೂಕಿನಲ್ಲಿ4,539 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 14 ಕೇಂದ್ರಗಳನ್ನು ಗುರುತಿಸಲಾಗಿದೆ.

ಸಿಸಿ ಕ್ಯಾಮೆರಾ ಅಳವಡಿಕೆ: ಪರೀಕ್ಷೆಯ 14 ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಕೆ ಕಾರ್ಯ ನಡೆಸಲಾಗಿದೆ. ಎಲ್ಲಕೇಂದ್ರಗಳಲ್ಲೂವೆಬ್ ಕಾಸ್ಟಿಂಗ್ ವ್ಯವಸ್ಥೆಯಾಗಿದೆ. ಈಗಾಗಲೇ ಪರೀಕ್ಷೆ ಕೇಂದ್ರಗಳ ಮುಖ್ಯಸ್ಥರು, ಕಸ್ಟೋಡಿಯನ್ ರು, ಸ್ಥಾನಿಕ ಜಾಗೃತಿದಳ ಅಧಿಕಾರಿಗಳು ಹಾಗೂ ಪ್ರತಿ ಪರೀಕ್ಷೆ ಕೇಂದ್ರಕ್ಕೊಬ್ಬರಂತೆ ಮೊಬೈಲ್ ಸ್ವಾಧೀನ ಕೊಠಡಿಗಳಿಗೆ ತಲಾ ಒಬ್ಬರಂತೆ ಕೊಠಡಿ ಮೇಲ್ವಿಚಾರಕರು ಹಾಗೂ ಹೆಚ್ಚುವರಿಯಾಗಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಒಟ್ಟಾರೆ, ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಲು ಸಕಲ ತಯಾರಿಯನ್ನು ಬಿಇಒ ಕಾಂಬೋಜಿ ನೇತೃತ್ವದಲ್ಲಿಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ನಡೆಸಿದ್ದಾರೆ.

ನಾನಾ ಇಲಾಖೆಗೆ ಪತ್ರ ಬರೆದ ಬಿಇಒ: ತಾಲೂಕಿನಲ್ಲಿಪರೀಕ್ಷೆ ಕೇಂದ್ರಗಳಲ್ಲಿಶೌಚಾಲಯ ಸ್ವಚ್ಛತೆಗೆ ಆದ್ಯತೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪ್ರತಿ ಕೇಂದ್ರಕ್ಕೆ ಒಬ್ಬ ಆರೋಗ್ಯ ಸಿಬ್ಬಂದಿ, ಪರೀಕ್ಷೆ ಕೇಂದ್ರಗಳಿಗೆ ತೆರಳುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ವ್ಯವಸ್ಥೆ, ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸಿಬ್ಬಂದಿ, ಪರೀಕ್ಷೆ ಕೇಂದ್ರಗಳ ಭದ್ರತೆಗೆ ಪೊಲೀಸರನ್ನು ನಿಯೋಜಿಸುವಂತೆಯೂ ಸಂಬಂಧಿಸಿದ ಇಲಾಖೆಗಳಿಗೆ ಬಿಇಒ ಎ.ಎನ್ .ಕಾಂಬೋಜಿ ಪತ್ರ ಬರೆದಿದ್ದಾರಲ್ಲದೆ, ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.

ವೆಬ್ ಕಾಸ್ಟಿಂಗ್ ಪ್ರಕ್ರಿಯೆ: ಎಲ್ಲಪರೀಕ್ಷೆ ಕೇಂದ್ರಗಳಲ್ಲಿವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಜತೆಗೆ ಒತ್ತಡ ರಹಿತ ವಾತಾವರಣ ಅವಶ್ಯ. ಎಲ್ಲಕೇಂದ್ರಗಳಲ್ಲಿಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಪೂರ್ವಭಾವಿಯಾಗಿ ಮತ್ತೊಮ್ಮೆ ಇಂಟರ್ ನೆಟ್ ವ್ಯವಸ್ಥೆ, ಯುಪಿಎಸ್ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಾಕ್ಸ್

ನಿರಂತರ ವಿದ್ಯುತ್ , ಪೊಲೀಸ್ ನಿಯೋಜನೆಗೆ ಮನವಿ

ಪರೀಕ್ಷೆ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂನವರು ಒದಗಿಸುವಂತೆ ಹಾಗೂ ಪರೀಕ್ಷೆ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಬಂದೋಬಸ್ ್ತಗೆ ಮನವಿ ಮಾಡಲಾಗಿದೆ. ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿನಿಷೇಧಾಜ್ಞೆ ಜಾರಿಗೊಳಿಸಿ, ಪರೀಕ್ಷೆ ಕೇಂದ್ರಗಳ ಸುತ್ತಮುತ್ತ ಸೈಬರ್ ಮತ್ತು ಝರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೇಂದ್ರಗಳಿಗೆ ತರುವಂತಿಲ್ಲ. ಈ ಬಗ್ಗೆ ಸೂಕ್ತ ಪರಿಶೀಲನೆ ನಡೆಸಲಾಗುವುದು. ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುವಂತೆ ಎಲ್ಲಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಕೋಟ್

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಗಜೇಂದ್ರಗಡ, ರೋಣ ತಾಲೂಕು ಸೇರಿದಂತೆ ಒಟ್ಟು 14 ಕೇಂದ್ರಗಳಲ್ಲಿ4,539 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಎಲ್ಲಪರೀಕ್ಷೆ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೇರಿ ಮೂಲ ಸೌಕರ್ಯ ಕಲ್ಪಿಸಲು ಆಯಾ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ.

-ಎ.ಎನ್ .ಕಾಂಬೋಜಿ. ಬಿಇಒ, ರಾಘವೇಂದ್ರ ಮ್ಯಾಕಲ್ , ಪ್ರಕಾಶ ಅಂಬೋರೆ, ಸಿಆರ್ ಪಿ

ಕೋಟ್

ಶಿಕ್ಷಣದ ಪ್ರಗತಿಯಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂಬುದನ್ನು ನಾನು ನಂಬಿದ್ದೇನೆ. ಹೀಗಾಗಿ, ರೋಣ ಕ್ಷೇತ್ರದಲ್ಲಿಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಬೇಕೆಂದು ಶಿಕ್ಷಣ ಇಲಾಖೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆಯನ್ನು ಎಲ್ಲಕೇಂದ್ರಗಳಲ್ಲಿಸುಗಮವಾಗಿ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಲಾಗಿದೆ.

-ಜಿ.ಎಸ್ .ಪಾಟೀಲ, ಶಾಸಕ, ಅಧ್ಯಕ್ಷ, ರಾಜ್ಯ ಖನಿಜ ಅಭಿವೃದ್ಧಿ ನಿಗಮ

ಫೋಟೊ: 14 ಜಿಜೆಡಿ2 :

2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿಶಿಕ್ಷಕರು.

ಫೋಟೊ: 14 ಜಿಜೆಡಿ 2:

ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿತಹಸೀಲ್ದಾರ್ ನಾಗರಾಜ ಮಾತನಾಡಿದರು. ಬಿಇಒ ಎ.ಎನ್ .ಕಾಂಬೋಜಿ ಇನ್ನಿತರರು ಇದ್ದರು.