ಮುಧೋಳದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ 440 ಪ್ರಕರಣಗಳನ್ನು ಪರಿಶೀಲಿಸಲಾಯಿತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗುರುರಾಜ ಜಿ. ಶಿರೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಅದಾಲತ್‌ನಲ್ಲಿ 329 ಪ್ರಕರಣಗಳು ಯಶಸ್ವಿಯಾಗಿ ಇತ್ಯರ್ಥಗೊಂಡವು. ಪ್ರಧಾನ ಹಿರಿಯ ನ್ಯಾಯಾಧೀಶ ವಿಜಯಕುಮಾರ ಕನ್ನೂರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ವಿವೇಕ ಗ್ರಾಮೋಪಾಧ್ಯೆ, ಪ್ರಧಾನ ಸಿವಿಲ್ ನ್ಯಾಯಾಧೀಶ ಲಗಮಾ ಹುಕ್ಕೇರಿ ಅವರು ಪ್ರಕರಣಗಳ ವಿಲೇವಾರಿಯಲ್ಲಿ ಪಾಲ್ಗೊಂಡಿದ್ದರು.
ಲೋಕ ಅದಾಲತ್ ನಲ್ಲಿ329 ಪ್ರಕರಣ ಇತ್ಯರ್ಥ
ಮುಧೋಳ: 3ನೇ ಹೆಚ್ಚುವರಿ ಜಿಲ್ಲಾಮತ್ತು ಸತ್ರ ನ್ಯಾಯಾಧೀಶ ಗುರುರಾಜ ಜಿ.ಶಿರೋಳ ಅಧ್ಯಕ್ಷತೆಯಲ್ಲಿನಾನಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿಲೋಕ ಅದಾಲತ್ ನಲ್ಲಿನ 440 ಪ್ರಕರಣಗಳ ಪೈಕಿ 329 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.
ಪ್ರಧಾನ ಹಿರಿಯ ನ್ಯಾಯಾಧೀಶ ವಿಜಯಕುಮಾರ ಕನ್ನೂರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ವಿವೇಕ ಗ್ರಾಮೋಪಾಧ್ಯೆ, ಪ್ರಧಾನ ಸಿವಿಲ್ ನ್ಯಾಯಾಧೀಶ ಲಗಮಾ ಹುಕ್ಕೇರಿ ಪ್ರಕರಣಗಳನ್ನು ಇತ್ಯರ್ಥಪಡಿಸಿದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ.ಡಿ.ಕತ್ತಿ ಮತ್ತಿತರರು ಭಾಗವಹಿಸಿದ್ದರು.