ಇಂದು ಜಿಲ್ಲಾಮಟ್ಟದ ವೃತ್ತಿ ಶಿಕ್ಷಣ ಪ್ರದರ್ಶನ

Contributed byraju.manjunath67@gmail.com|Vijaya Karnataka

ರಾಮನಗರದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್‌ ಮೇಳ ನಡೆಯಲಿದೆ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರವೇಶ ಪರೀಕ್ಷೆಗಳ ಮಾಹಿತಿ ನೀಡಲಾಗುವುದು. ಅಲ್ಲದೆ, ರುಡ್‌ಸೆಟ್‌ ಸಂಸ್ಥೆಯಿಂದ ಡಿಟಿಪಿ ಉಚಿತ ತರಬೇತಿ ನೀಡಲಾಗುತ್ತಿದೆ. ಗ್ರಾಮೀಣ ಯುವಕ-ಯುವತಿಯರು ಇದರ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆಯನ್ನು ಸಂಪರ್ಕಿಸಬಹುದು.

district level vocational education exhibition and free computer training

ಸಂಕ್ಷಿಪ್ತ ಸುದ್ದಿಗಳು

ಇಂದು ಜಿಲ್ಲಾಮಟ್ಟದ ವೃತ್ತಿ ಶಿಕ್ಷಣ ಪ್ರದರ್ಶನ

ರಾಮನಗರ: ಡಯಟ್ ವತಿಯಿಂದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳವನ್ನು ಮಾ.17ರಂದು ಬೆಳಗ್ಗೆ 9 ರಿಂದ ಸಂಜೆ 5.30ರ ವರೆಗೆ ನಗರದ ಎಂ.ಜಿ ರಸ್ತೆಯ ವಾಟರ್ ಟ್ಯಾಂಕ್ ಸರ್ಕಲ್ ಬಳಿಯಿರುವ ಜಿಲ್ಲಾಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್ )ಯಲ್ಲಿಆಯೋಜಿಸಲಾಗಿದೆ.

2025-26ನೇ ಸಾಲಿನಲ್ಲಿಡಯಟ್ ನಲ್ಲಿಜಿಲ್ಲಾವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪಿಸಲಾಗಿದೆ. ಈ ಘಟಕದ ಪ್ರಮುಖ ಉದ್ದೇಶ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯ ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ವೃತ್ತಿ ಪ್ರಪಂಚದ ಅರಿವು ಮತ್ತು ಆಯ್ಕೆಗಳ ಮಾರ್ಗದರ್ಶನ ನೀಡುವುದಾಗಿದೆ. ಇದರ

ಭಾಗವಾಗಿ ಆಯೋಜಿಸಲಾಗಿರುವ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರೆಯರ್ ಮೇಳದಲ್ಲಿವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವೃತ್ತಿ ಮಾರ್ಗದರ್ಶನ, ಪ್ರವೇಶ ಪರೀಕ್ಷೆಗಳು, ಸಂಪನ್ಮೂಲ ಕೇಂದ್ರ, ಸೌಲಭ್ಯಗಳ ಮಾಹಿತಿ ಹಾಗೂ ತಜ್ಞರ ಮಾರ್ಗದರ್ಶನದಂತಹ ಉಪಯುಕ್ತ ಮಾಹಿತಿ ನೀಡಲಾಗುವುದು ಎಂದು ಜಿಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು (ಅಭಿವೃದ್ಧಿ) ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಡಿಟಿಪಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ

ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆ ವತಿಯಿಂದ ಕಂಪ್ಯೂಟರ್ ಡಿಟಿಪಿ ಕುರಿತು 45 ದಿನಗಳ ಉಚಿತ ತರಬೇತಿಯನ್ನು ಏಪ್ರಿಲ್ 02 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿ ಅವಧಿಯಲ್ಲಿಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9481778047 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.