ಕೊಡಗು ಜಿಲ್ಲೆಯ ಕೆಲವೆಡೆ ಮಳೆ

Contributed bypagadigathalagiri@gmail.com|Vijaya Karnataka

ಕೊಡಗು ಜಿಲ್ಲೆಯ ಕಕ್ಕಬ್ಬೆ, ನೆಲಜಿ, ಮಡಿಕೇರಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾನುವಾರ ಸಂಜೆ ಮಳೆಯಾಗಿದೆ. ಸುಡುಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರೆದಿದೆ. ಕಾಫಿ ಬೆಳೆಗಾರರು ಮಳೆಯ ನಿರೀಕ್ಷೆಯಲ್ಲಿದ್ದರು. ಈಗ ಸುರಿದಿರುವ ಮಳೆಯಿಂದ ಬೆಳೆಗಾರರಿಗೆ ಅನುಕೂಲವಾಗಿದೆ. ಕೃತಕ ನೀರಾವರಿ ಅವಲಂಬನೆ ತಪ್ಪಿದೆ.

historic rain in coorg district

ವಿಕ ಸುದ್ದಿಲೋಕ ಮಡಿಕೇರಿ ಜಿಲ್ಲೆಯ ಕೆಲ ಭಾಗಗಳಲ್ಲಿಭಾನುವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಸುಡುಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪೆರೆದಿದೆ. ಕಕ್ಕಬ್ಬೆ, ನೆಲಜಿ, ಮಡಿಕೇರಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿಮಳೆಯಾಗಿದೆ. ಬೆಳಗಿನಿಂದಲೇ ಮೋಡ ಕವಿದ ವಾತಾವರಣವಿತ್ತಾದರೂ ಮಳೆಯಾಗಿರಲಿಲ್ಲ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಿದ್ದು, ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಇನ್ನು ಕಾಫಿ ಬೆಳೆಗೆ ಮಳೆಯ ಅವಶ್ಯಕತೆ ಇತ್ತು. 2 ವಾರದ ಹಿಂದೆಯೇ ಮಳೆ ಸುರಿಯಬೇಕಾಗಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿಮಳೆಯಾಗದೆ ಬೆಳೆಗಾರರು ನಿರಾಸೆ ಅನುಭವಿಸಿದ್ದರು. ಅಲ್ಲದೆ ಕೃತಕವಾಗಿ ನೀರು ಹಾಯಿಸುತ್ತಿದ್ದರು. ಈಗ ಮಳೆಯಾಗಿರುವುದರಿಂದ ಬೆಳೆಗಾರರಿಗೆ ಅನುಕೂಲವಾಗಿದೆ.