ಕಾರ್ಯಕರ್ತರ ಪರಿಶ್ರಮದಿಂದ ಪಕ್ಷದ ಬೆಳವಣಿಗೆ

Contributed bymallugoudra461987@gmali.com|Vijaya Karnataka

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ತರಬೇತಿ ಕಾರ್ಯಾಗಾರದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿದರು. ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರ ಪರಿಶ್ರಮ ಮುಖ್ಯ ಎಂದರು. ಸ್ಥಳೀಯ ಸಂಸ್ಥೆ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಬೇಕು. ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು ಎಂದು ವಿನಯಕುಮಾರ್ ಸೊರಕೆ ಕರೆ ನೀಡಿದರು.

selection of commissioners without security measures

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿಕೆ | ತರಬೇತಿ ಕಾರ್ಯಾಗಾರ , ಪದಗ್ರಹಣ ಕಾರ್ಯಕ್ರಮ

ವಿಕ ಸುದ್ದಿಲೋಕ ಬೆಳಗಾವಿ

ಕಾಂಗ್ರೆಸ್ ಪಕ್ಷದಲ್ಲಿನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇದ್ದು, ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿಕಾಂಗ್ರೆಸ್ ದಿಗ್ವಿಜಯ ಸಾಧಿಸುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ನಗರದ ಜಿಲ್ಲಾಕಾಂಗ್ರೆಸ್ ಭವನದಲ್ಲಿಸೋಮವಾರ ಬೆಳಗಾವಿ ನಗರ ಹಾಗೂ ಗ್ರಾಮಾಂತರ ಜಿಲ್ಲಾಪ್ರಚಾರ ಸಮಿತಿ ವತಿಯಿಂದ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ಪದಗ್ರಹಣ ಕಾರ್ಯಕ್ರಮದಲ್ಲಿಭಾಗವಹಿಸಿ ಅವರು ಮಾತನಾಡಿದರು.

‘‘ಸಣ್ಣ ಪುಟ್ಟ ವ್ಯತ್ಯಾಸಗಳ ಬಗ್ಗೆ ಯಾರೂ ಬೇಸರ ಮಾಡಿಕೊಳ್ಳದೆ ಸರಿಪಡಿಸಿಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಕಾರ್ಯಕರ್ತರ ಪರಿಶ್ರಮವಿದ್ದಾಗ ಮಾತ್ರ ಪಕ್ಷದ ಬೆಳವಣಿಗೆ ಸಾಧ್ಯ. ನಿರಂತರ ಜನಸಂಪರ್ಕದೊಂದಿಗೆ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಜಿಲ್ಲೆಯಲ್ಲಿಬಿಜೆಪಿಯನ್ನು ಎದುರಿಸುವ ಸಾಮರ್ಥ್ಯವನ್ನು ಕಾಂಗ್ರೆಸ್ ಹೊಂದಿದೆ. ಶೀಘ್ರ ಸ್ಥಳೀಯ ಚುನಾವಣೆಗಳು ನಡೆಯಲಿವೆ. 100 ಸದಸ್ಯರನ್ನು ಒಳಗೊಂಡ ಬೆಳಗಾವಿ ಜಿಲ್ಲಾಪಂಚಾಯಿತಿ ಪ್ರಮುಖವಾಗಿದ್ದು, ಇಲ್ಲಿಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ,’’ ಎಂದು ತಿಳಿಸಿದರು.

ಬೆಳಗಾವಿ ಗ್ರಾಮೀಣ ಜಿಲ್ಲಾಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ರಾಜಾಸಲೀಂ ಕಾಶೀಮನವರ್ , ಮುನೀರ್ , ಶಂಭು ಶೆಟ್ಟಿ, ಸುಧೀರಕುಮಾರ್ ಮುರೋಳಿ, ಜಿಲ್ಲಾಪ್ರಚಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್ ....

ಕೇಂದ್ರದ ವೈಫಲ್ಯ ತಿಳಿಸಿ:

ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ‘‘ಕೇಂದ್ರ ಸರಕಾರದ ವೈಫಲ್ಯಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ತಿಳಿಸಬೇಕು. ಜತೆಗೆ ಪಕ್ಷ ಸಂಘಟನೆಗೆ ಒತ್ತು ನೀಡಿ ಮುಂದಿನ ಎಲ್ಲಸ್ಥಳೀಯ ಚುನಾವಣೆಯಲ್ಲಿಯೂ ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಬೇಕು,’’ ಎಂದು ಕರೆ ನೀಡಿದರು.

ಫೋಟೋ: 16ಮಲ್ಲು4

ಬೆಳಗಾವಿ ಜಿಲ್ಲಾಕಾಂಗ್ರೆಸ್ ಭವನದಲ್ಲಿಜರುಗಿದ ಸಭೆಯಲ್ಲಿವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಮಾತನಾಡಿದರು.