* 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
*15,941 ಪರೀಕ್ಷಾ ಕೇಂದ್ರಗಳಲ್ಲಿಸಿದ್ಧತೆ
*ಅಕ್ರಮ ನಡೆಯದಂತೆ ಪರೀಕ್ಷಾ ಕೇಂದ್ರಗಳಲ್ಲಿನಿಗಾ
ವಿಕ ಸುದ್ದಿಲೋಕ ಬೆಂಗಳೂರು
ರಾಜ್ಯದಲ್ಲಿಮಾ. 18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಏ. 2ರವರೆಗೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಣಿ ಮಾಧಿಡಿಧಿಕೊಂಡಿಧಿದ್ದಾರೆ. ಇಧಿದಧಿರಲ್ಲಿ8,12,855 ಮಂದಿ ಹೊಸಬರು, 62,845 ಮಂದಿ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
15,941 ಪರೀಕ್ಷಾ ಕೇಂದ್ರಗಳಲ್ಲಿಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪರೀಕ್ಷೆ ನಡೆಯಲಿದೆ. ಅಕ್ರಮಗಳು ನಡೆಯದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿಗಾ ವಹಿಸಿದೆ. ಈಗಾಗಲೇ ಮಂಡಳಿಯ ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆಪತ್ರಿಕೆಗಳು, ನೀಲನಕ್ಷೆ ಒದಗಿಸಲಾಗಿದೆ.
ಈಗ ಪ್ರಶ್ನೆಪತ್ರಿಕೆಗಳ ಸೋರಿಕೆ, ಪರೀಕ್ಷಾ ಕೇಂದ್ರದ ಸುತ್ತ ಅಕ್ರಮಗಳು ನಡೆಯದಂತೆ ಕ್ರಮ ವಹಿಸಿದ್ದು, ಪೊಲೀಸ್ ಇಲಾಖೆ ಕೂಡ ಸಹಕಾರ ನೀಡಲಿದೆ ಎಂದು ಪೊಧಿಲೀಸ್ ಅಧಿಧಿಧಿಕಾಧಿರಿಧಿಗಳು ಭಧಿರಧಿವಸೆ ನೀಧಿಡಿಧಿದ್ದಾಧಿರೆ.
ಮಾ. 18ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಪ್ರಶ್ನೆಪತ್ರಿಕೆ ಸೋರಿಕೆ, ಮಾರಾಟ ಕುರಿತು ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು, ಯಾವುದೇ ಸಮಸ್ಯೆಗಳು ಎದುರಾಗದಂತೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ.
ಬಾಕ್ಸ್
ಏನೆಲ್ಲಾಸಿದ್ಧತೆ?
*ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿನಿಷೇಧಾಜ್ಞೆ
*ಪರೀಕ್ಷೆ ದಿನ 200 ಮೀಟರ್ ವ್ಯಾಪ್ತಿಯಲ್ಲಿಜೆರಾಕ್ಸ್ ಅಂಗಡಿ, ಸೈಬರ್ ಸೆಂಟಧಿರ್ ಬಂದ್
*ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿಸಿಸಿ ಕ್ಯಾಮರಾ ನಿಗಾ
*ಎಲ್ಲಾಪರೀಕ್ಷಾ ಕೇಂದ್ರಗಳಲ್ಲಿವೆಬ್ ಕಾಸ್ಟಿಂಗ್ ಮೂಲಕ ಮೇಲ್ವಿಚಾರಣೆ
*ಅಗತ್ಯವಿರುವ ಕಡೆ ಪೊಲೀಸ್ ಬಂದೋಬಸ್ ್ತ
ಬಾಕ್ಸ್
ಯಾವೆಲ್ಲವಸ್ತು ನಿಷೇಧ?
*ಮೊಬೈಲ್ , ಎಲೆಕ್ಟ್ರಾನಿಕ್ ಉಪಕರಣಗಳು
*ಕ್ಯಾಲ್ಕುಲೇಟರ್ , ಪರ್ಸ್ , ಬ್ಯಾಗ್ ಗಳು
*ಸ್ಮಾರ್ಟ್ ವಾಚ್
ಬಾಕ್ಸ್
ಉಚಿತ ಬಸ್ ವ್ಯವಸ್ಥೆ
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಧಿದ್ಯಾಧಿರ್ಥಿಧಿಗಳು ಪ್ರವೇಶಪತ್ರ ಬಳಸಿ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿಉಚಿತವಾಗಿ ಪ್ರಯಾಣಿಸಬಹುದಾಗಿದೆ.

