ವಿಕ ಫೋಕಸ್ ( ಲೋಕಲ್ ಲೀಡ್ ) 52 ಕೇಂದ್ರದಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆ

Contributed byadarshkodi15@gmail.com|Vijaya Karnataka

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ನಡೆದಿದೆ. ಮಾ.18 ರಿಂದ ಪರೀಕ್ಷೆ ಆರಂಭವಾಗಲಿದ್ದು, ಏ.2 ರಂದು ಕೊನೆಗೊಳ್ಳಲಿದೆ. 13,406 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 52 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪಾರದರ್ಶಕತೆಗಾಗಿ ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. 12 ಮಂದಿ ವೆಬ್‌ ಕಾಸ್ಟಿಂಗ್‌ ವೀಕ್ಷಣೆ ಮಾಡಲಿದ್ದಾರೆ. ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ.

sslc exam at 52 centers in bangalore preparations for officials before yugadi

ವಿಕ ಫೋಕಸ್ ( ಲೋಕಲ್ ಲೀಡ್ )

52 ಕೇಂದ್ರದಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆ

ಯುಗಾದಿ ಮುನ್ನದಿನವಾದ ಮಾ.18ರಿಂದ ಆರಂಭ | ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿಉತ್ತಮ ರಿಸಲ್ಟ್ |12 ಮಂದಿ ವೆಬ್ ಕಾಸ್ಟಿಂಗ್ ವೀಕ್ಷಣೆಗೆ ನೇಮಕ

ಆದರ್ಶ ಕೋಡಿ ಬೆಂಗಳೂರು ಗ್ರಾಮಾಂತರ

್ಚಧಿada್ಟsha.kಃಠಿಜಿಞಛಿsಟ್ಛಜ್ಞಿdಜಿa.್ಚಟಞ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಯುಗಾದಿ ಹಬ್ಬಕ್ಕೆ ಒಂದು ದಿನ ಮುನ್ನ ಪರೀಕ್ಷೆ ಆರಂಭವಾಗಲಿದೆ. ಜಿಲ್ಲೆಯಲ್ಲಿಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕ್ರಮವಹಿಸಲಾಗಿದೆ.

ರಾಜ್ಯದಲ್ಲಿಮಾ.18ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಏ.2ರವರೆಗೆ ನಡೆಯಲಿದೆ. ಮೊದಲ ದಿನ ಪ್ರಥಮ ಭಾಷೆಯಿಂದ ಆರಂಭವಾಗಲಿದ್ದು, ಸಮಾಜ ವಿಜ್ಞಾನದೊಂದಿಗೆ ಕೊನೆಗೊಳ್ಳುತ್ತದೆ. ಈ ಪರೀಕ್ಷೆಗೆ ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 52 ಪರೀಕ್ಷಾ ಕೇಂದ್ರದಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಪಾರದರ್ಶಕತೆ ಕಾಯ್ದುಕೊಂಡು ಪರೀಕ್ಷೆ ನಡೆಸಲು ಸಿಸಿಟಿವಿ, ವೆಬ್ ಕಾಸ್ಟಿಂಗ್ ಅಳವಡಿಸಲಾಗಿದೆ. ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದ್ದು, ರಾಜ್ಯದಲ್ಲಿಯೇ ಉತ್ತಮ ರಾರ ಯಕಿಂಗ್ ಪಡೆಯಲು ಸಾಕಷ್ಟು ಪ್ರಯತ್ನ ಮಾಡಲಾಗಿದೆ.

13,406 ಪರೀಕ್ಷಾರ್ಥಿಗಳು:

ಜಿಲ್ಲೆಯಲ್ಲಿಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಎದುರಿಸಲು ಒಟ್ಟು 278 ಪ್ರೌಡಶಾಲೆಗಳ ಒಟ್ಟು 13,406 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಸರಕಾರಿ ಸಾರಿಗೆಯಲ್ಲಿಉಚಿತವಾಗಿ ಪ್ರಯಾಣಿಸಲು ವ್ಯವಸ್ಥೆ ಇರಲಿದೆ. ಜತೆಗೆ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಆರೋಗ್ಯ ಇಲಾಖೆ, ಬೆಸ್ಕಾಂ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಯಾವುದೇ ಸಮಸ್ಯೆ ಇಲ್ಲದೇ ಪರೀಕ್ಷೆ ನಡೆಸಲು ಅಗತ್ಯ ಕ್ರಮವಹಿಸಲು ಸೂಚನೆ ನೀಡಲಾಗಿದೆ.

ಉತ್ತಮ ಫಲಿತಾಂಶ:

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿಶಿಕ್ಷಣ ಇಲಾಖೆಯೂ 3 ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಿತ್ತು. ಜಿಲ್ಲೆಯಲ್ಲೂಕೂಡ 3 ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿನಡೆಸಲಾಗಿದ್ದು, ಮೊದಲ ಪರೀಕ್ಷೆಯಲ್ಲಿಶೇ.60ರಷ್ಟು ಮಾತ್ರ ಫಲಿತಾಂಶ ಪಡೆಯಲು ಸಾಧ್ಯವಾಯಿತು. ಇದರಿಂದ ಮತ್ತಷ್ಟು ಕಾರ್ಯ ಪ್ರವೃತ್ತರಾದ ಶಿಕ್ಷಣ ಇಲಾಖೆ ನಾನಾ ಹಂತದ ಅಧಿಕಾರಿಗಳು ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಮಾಹಿತಿ ಪಡೆದು ಅವರಿಗೆ ಸಲಹೆಗಳನ್ನು ನೀಡಿದರು. ಇದರಿಂದ ಮುಂದಿನ ಪರೀಕ್ಷೆಯಲ್ಲಿಶೇ.73ರಷ್ಟು ಫಲಿತಾಂಶ ಪಡೆಯಲು ಸಾಧ್ಯವಾಯಿತು. ಫಲಿತಾಂಶವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಪ್ರಯತ್ನಗಳ ಮುಂದುವರೆಸಲಾಯಿತು. ಈ ಪ್ರಯತ್ನದಿಂದ ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿಶೇ.83.61ರಷ್ಟು ಫಲಿತಾಂಶ ಪಡೆಯಲು ಸಾಧ್ಯವಾಯಿತು.

ಫಲಿತಾಂಶದಲ್ಲಿಆಂತರಿಕ ಅಂಕಗಳನ್ನು ಒಳಗೊಳ್ಳದೆ ಇರುವುದರಿಂದ ಅದನ್ನು ಸೇರಿಸಿದ್ದಾಗ ಉತ್ತಮ ಫಲಿತಾಂಶ ಪಡೆಯುವ ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ.

ವೆಬ್ ಕಾಸ್ಟಿಂಗ್ ವೀಕ್ಷಣೆ:

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಯಾವುದೇ ರೀತಿಯ ನಕಲು ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಎಲ್ಲಾಶಾಲೆಗಳಲ್ಲಿಸಿಸಿಟಿವಿ ಸಮರ್ಪಕ ಕೆಲಸ ಮಾಡುತ್ತದ್ದೇಯೆ ಇಲ್ಲವೆ ಎಂದು ಪರೀಕ್ಷೆ ನಡೆಸಲಾಗಿದೆ. ಶಾಲೆಗಳಲ್ಲಿನ ವೆಬ್ ಕಾಸ್ಟಿಂಗ್ ವೀಕ್ಷಣೆಗೆ ಜಿಲ್ಲಾಡಳಿತ ಭವನದ ಡಿಡಿಪಿಐ ಕಚೇರಿಯಲ್ಲಿವೀಕ್ಷಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 12 ಮಂದಿ ವೀಕ್ಷಣೆಕಾರರು ತಲಾ 4-5 ಕೇಂದ್ರಗಳಂತೆ ಗಮನಹರಿಸಲಿದ್ದಾರೆ. ಇನ್ನೂ ಡಯಟ್ ಪ್ರಾಂಶುಪಾಲರ ನೇತೃತ್ವದಲ್ಲಿ27 ಮಂದಿ ಸಿಬ್ಬಂದಿ 2 ಕೇಂದ್ರಕ್ಕೆ ಒಬ್ಬರಂತೆ ತೆರಳಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾಮಟ್ಟದಲ್ಲಿ3 ವಾಹನಗಳ ಮೂಲಕ ಸ್ಕಾ$್ವಡ್ ಗಳು ಪರೀಕ್ಷೆ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿಗಳನ್ನು ನೀಡಿ ಪರಿಶೀಲಿಸುವ ಕೆಲಸ ಮಾಡುತ್ತಾರೆ.

ಪ್ರಮುಖಾಂಶಗಳು

* ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುರು

* ಏ.2ರಂದು ಸಮಾಜ ವಿಜ್ಞಾನ ಪರೀಕ್ಷೆ ಮೂಲಕ ಪರೀಕ್ಷೆ ಮುಕ್ತಾಯ

* ಮೌಲ್ಯಮಾಪನದ ಕೇಂದ್ರದ ಹೆಸರಿನ ಬಂದಲು ಕೋಡ್ ಬರೆಯಲು ಸೂಚನೆ

* ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷೆ ವೀಕ್ಷಣೆ, 12 ಸಿಬ್ಬಂದಿ ನೇಮಕ

ಕೋಟ್ ,

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತಮವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 13406 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ವೆಬ್ ಕಾಸ್ಟಿಂಗ್ ಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

-ಬೈಲಾಂಜಿಪ್ಪ | ಉಪನಿರ್ದೇಶಕ, ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ

ಫೋಟೋ: 1603ವಿಕೆ1: ಸಾಂದರ್ಭಿಕ ಚಿತ್ರ.