*ಧಿ*ನೆಲ್ಲಿಕುಂಜೆ ದೇವಸ್ಥಾನ ರಸ್ತೆಯಲ್ಲಿಶ್ರಮದಾನ

Contributed byprasadsarali@gmail.com|Vijaya Karnataka

ನೆಲ್ಲಿಕುಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಾ. 29ರಿಂದ ಏ. 3ರವರೆಗೆ ನಡೆಯಲಿದೆ. ಇದರ ಅಂಗವಾಗಿ ರಸ್ತೆಯ ಬದಿಯ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಕಾರ್ಯಕರ್ತರು ಕಾಡನ್ನು ತೆರವುಗೊಳಿಸಿ, ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದರು. ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಪ್ರೋತ್ಸಾಹಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಮಾತನಾಡಿದರು.

we organize shramadan under government schemes

ಬದಿಯಡ್ಕ : ನೆಲ್ಲಿಕುಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ. 29ರಿಂದ ಏ. 3ರ ತನಕ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ವಾರ್ಡ್ ಸದಸ್ಯ ಮಧುಸೂಧನ ಉಕ್ಕಿನಡ್ಕ ನೇತೃತ್ವದಲ್ಲಿ ಸ್ವಚ್ಛತಾ ಕಾರ ್ಯವನ್ನು ನಡೆಸಲಾಯಿತು. ಉಕ್ಕಿನಡ್ಕದಿಂದ ದೇವಸ್ಥಾನಕ್ಕೆ ಸಾಗುವ ರಸ್ತೆಯ ಎರಡೂ ಬದಿಗಳ ಕಾಡನ್ನು ತೆರವುಗೊಳಿಸಿದ ಕಾರ ್ಯಕರ್ತರು ಪ್ಲಾಸ್ಟಿಕ್ ಹಾಗೂ ಇನ್ನಿತರ ವಸ್ತುಗಳನ್ನು ಶೇಕರಿಸಿದರು. ಈ ಸಂದರ್ಭ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದರು.ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಡಿ. ಕಾರ ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾಪಂಚಾಯಿತಿ ಸದಸ್ಯ ರಾಮಪ್ಪ ಮಂಜೇಶ್ವರ, ಬ್ಲಾಕ್ ಪಂಚಾಯಿತಿ ಸದಸ್ಯ ಮಹೇಶ್ ವಳಕ್ಕುಂಜ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಕ್ಷೇಮಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ರಜನಿ ಸಂದೀಪ್ ,ನಾನಾ ವಾರ್ಡ್ ಗಳ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಮೇಗಿನಕಡಾರು, ಉಷಾ ಪಳ್ಳತ್ತಡ್ಕ, ಶ್ಯಾಮಪ್ರಸಾದ ಸರಳಿ, ಪ್ರಮುಖರಾದ ನಾರಾಯಣ ಪೆರಡಾಲ ಜತೆಗಿದ್ದರು. ವಾರ್ಡ್ ಸದಸ್ಯ ಮಧುಸೂದನ ಕಂಗಿಲ ಸ್ವಾಗತಿಸಿದರು.

ಚಿತ್ರ: 14 ಬಿಎ ನೆಲ್ಲಿಕುಂಜೆ