ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಜಿ.ಟಿ. ದಿನೇಶ್‌ಕುಮಾರ್ ಅವರಿಗೆ ಜಾಮೀನು ದೊರೆತಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಈ ಆದೇಶ ನೀಡಿದೆ. ತನಿಖಾಧಿಕಾರಿ ದೋಷಾರೋಪಪಟ್ಟಿ ಸಲ್ಲಿಸಲು ವಿಫಲರಾದ ಕಾರಣ ಡಿಫಾಲ್ಟ್ ಜಾಮೀನು ನೀಡಲಾಗಿದೆ. ದಿನೇಶ್‌ಕುಮಾರ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧಿಸಿದೆ.
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ, ಮಾಜಿ ಆಯುಕ್ತ ಜಿ.ಟಿ. ದಿನೇಶ್‌ಕುಮಾರ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ಷರತ್ತುಬದ್ಧ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದೆ. ತನಿಖಾಧಿಕಾರಿ ನಿಗದಿತ ಅವಧಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ವಿಫಲರಾದ ಕಾರಣ ಈ ಜಾಮೀನು ನೀಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಜಿ.ಟಿ. ದಿನೇಶ್‌ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ತನಿಖಾಧಿಕಾರಿಗಳು ಸರಿಯಾದ ಸಮಯಕ್ಕೆ ಚಾರ್ಜ್‌ಶೀಟ್ ಸಲ್ಲಿಸದ ಕಾರಣ, ನ್ಯಾಯಾಲಯವು ಡಿಫಾಲ್ಟ್ ಜಾಮೀನು ನೀಡಿ ಆದೇಶಿಸಿದೆ.ಆರೋಪಿತ ಅರ್ಜಿದಾರರು 1 ಲಕ್ಷ ರೂಪಾಯಿಗಳ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆಯನ್ನು ನೀಡಬೇಕಿದೆ. ಈ ಜಾಮೀನು ಪಡೆಯಲು ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿದೆ.