* ಎಡಿಸಿ ಎನ್ .ಮಹಮ್ಮದ್ ಝುಬೇರ್ ಹೇಳಿಕೆ
ಮಹನೀಯರ ಜಯಂತಿ ಅರ್ಥಪೂರ್ಣ ಆಚರಿಸಿ
ವಿಕ ಸುದ್ದಿಲೋಕ ಬಳ್ಳಾರಿ
‘‘ಜಿಲ್ಲಾ ಕೇಂದ್ರದಲ್ಲಿಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು,’’ ಎಂದು ಅಪರ ಜಿಲ್ಲಾಧಿಕಾರಿ ಎನ್ .ಮಹಮ್ಮದ್ ಝುಬೇರ್ ಹೇಳಿದರು.
ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಮಹನೀಯರ ಜಯಂತಿ ಕುರಿತು ಅಧಿಕಾರಿಗಳು, ಸಮುದಾಯದ ಮುಖಂಡರೊಂದಿಗೆ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
‘‘ ಜಿಲ್ಲಾಡಳಿತ , ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾ.23ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿಯನ್ನು ನಗರದ ಹೊಂಗಿರಣ ಸಭಾಂಗಣದಲ್ಲಿಅಚ್ಚುಕಟ್ಟಾಗಿ ಆಯೋಜಿಸಬೇಕು. ಮಾ.31ರಂದು ಭಗವಾನ್ ಮಹಾವೀರ ಜಯಂತಿಯನ್ನು ನಗರದ ಪಾಶ್ರ್ವನಾಥ ಬಸದಿಯಲ್ಲಿವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಅದಕ್ಕೆ ಬೇಕಾದ ಎಲ್ಲವ್ಯವಸ್ಥೆ ಮಾಡಿಕೊಳ್ಳಬೇಕು,’’ ಎಂದರು.
‘‘ಜಯಂತಿ ಆಚರಣೆಯ ಸಂದರ್ಭದಲ್ಲಿಡಿಜೆ ಬಳಕೆ ಮತ್ತು ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಾರ್ಯಕ್ರಮದ ವೇದಿಕೆಯಲ್ಲಿಮಾತ್ರ ಬ್ಯಾನರ್ ಅಳವಡಿಸಲು ಅವಕಾಶವಿದ್ದು, ನಗರದ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿಬ್ಯಾನರ್ ಹಾಕುವುದನ್ನು ನಿರ್ಬಂಧಿಸಲಾಗಿದೆ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು. ವಚನ ಸಂಗೀತ ಗಾಯನ ಏರ್ಪಡಿಸಬೇಕು. ಜಯಂತಿ ಕಾರ್ಯಕ್ರಮಗಳಲ್ಲಿಹೆಚ್ಚಿನ ಸಂಖ್ಯೆಯಲ್ಲಿಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು,’’ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಡಿಡಿಪಿಐ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಇದ್ದರು.
17 ಮಾರುತಿ 02
ಬಳ್ಳಾರಿಯ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಎನ್ .ಮಹಮ್ಮದ್ ಝುಬೇರ್ ಮಾತನಾಡಿದರು.

