ಇಂದು ರಾಜ್ಯಪಾಲರ ಭೇಟಿ
ಬಳ್ಳಾರಿ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮಾ.18ರಂದು ಜಿಲ್ಲೆಗೆ ಪ್ರವಾಸ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ ಬೆಂಗಳೂರಿನ ಲೋಕ ಭವನದಿಂದ ಎಚ್ .ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಶೇಷ ವಿಮಾನದ ಮೂಲಕ ಬಳ್ಳಾರಿಯ ತೋರಣಗಲ್ಲುಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಬೆಳಗ್ಗೆ 07.30ಕ್ಕೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ ಸಿ) ಮೈದಾನದಲ್ಲಿಹಮ್ಮಿಕೊಂಡಿರುವ ನಶಾಮುಕ್ತ ಭಾರತ-ಯುವ ಶುದ್ಧಿ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು. ಬಳಿಕ ತೋರಣಗಲ್ಲುಜಿಂದಾಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮರಳಿ ಬೆಂಗಳೂರಿಗೆ ಪ್ರಯಾಣಿಸುವರು.
17 ಮಾರುತಿ 01
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ .
**
ಕುಂದು ಕೊರತೆ ಸಭೆ ಇಂದು
ಬಳ್ಳಾರಿ: ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-1 ಮತ್ತು 2ರ ವ್ಯಾಪ್ತಿಯ ಎಚ್ .ಟಿ ಮತ್ತು ಇ.ಎಚ್ .ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಮಾ.18 ರಂದು ಬೆಳಗ್ಗೆ 11 ಗಂಟೆಗೆ ವಲಯ ಕಚೇರಿ ಮೊದಲ ಮಹಡಿಯ ಸಭಾಂಗಣದಲ್ಲಿಆಯೋಜಿಸಲಾಗಿದೆ. ಬಳ್ಳಾರಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಎಂಜಿನಿಯರ್ ಅಧ್ಯಕ್ಷತೆ ವಹಿಸುವರು. ಸಭೆಗೆ ನಗರದ ಎಲ್ಲಎಚ್ .ಟಿ ಮತ್ತು ಇ.ಎಚ್ .ಟಿ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿತಿಳಿಸಿದ್ದಾರೆ.

