23ರಂದು ಉದ್ಯೋಗ ಮೇಳ
ವಿಕ ಸುದ್ದಿಲೋಕ ಚಿಕ್ಕಮಗಳೂರು
ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಉದ್ಯೋಗ ವಿನಿಮಯ ಕಚೇರಿ ಹಾಗೂ ಐಡಿಎಸ್ ಜಿ ಕಾಲೇಜು ಸಹಭಾಗಿತ್ವದಲ್ಲಿಮಾ.23ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9ರಿಂದ ಸಂಜೆ 4ರವರೆಗೆ ನಗರದ ಐಡಿಎಸ್ ಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಉದ್ಯೋಗ ಮೇಳ ನಡೆಯಲಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವೀಧರರು ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ರೆಸ್ಯೂಮ್ ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ಮೇಳದಲ್ಲಿಪಾಲ್ಗೊಳ್ಳಲು ಬಯಸುವವರು ಉದ್ಯೋಗಕ್ಕೆ ಎಟಟಜ್ಝಛಿ ್ಛಟ್ಟಞ (hಠಿಠಿps://್ಛಟ್ಟಞs.ಜ್ಝಛಿ/ಎ್ಞ್ಜ7yಖಿಖಿಘ2ಈ9ಒಔಋpಜ6) ಸಂಬಂಧಿಸಿದಂತೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ. ಜಿಲ್ಲೆಯ ಯುವನಿಧಿ ಫಲಾನುಭವಿಗಳು ಉದ್ಯೋಗ ಮೇಳದಲ್ಲಿಕಡ್ಡಾಯವಾಗಿ ಹಾಜರಾಗಿ ಮಾರ್ಚ್-2026ರ ಮಾಹೆಯ ಸ್ವಯಂ ಘೋಷಣೆಯನ್ನು ಸ್ಥಳದಲ್ಲಿಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾಉದ್ಯೋಗ ಮಿನಿಮಯ ಕೇಂದ್ರ (ದೂರವಾಣಿ ಸಂಖ್ಯೆ: 08262-295538/ 9945198500/ 9964851195) ವನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿತಿಳಿಸಲಾಗಿದೆ.

