ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ವಿಕ ಸುದ್ದಿಲೋಕ ಶಿಗ್ಗಾವಿ
ಸಂವಿಧಾನದಲ್ಲಿಮಹಿಳೆಯರಿಗೆ ಸಮಾನ ಹಕ್ಕು ಹಾಗೂ ವಿಶೇಷ ಕಾನೂನುಗಳನ್ನು ನೀಡಲಾಗಿದೆ. ಇವುಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಕುಟುಂಬದ ಜವಾಬ್ದಾರಿಯೊಂದಿಗೆ ಎಲ್ಲಕ್ಷೇತ್ರಗಳಲ್ಲಿಯಶಸ್ವಿಯಾಗುತ್ತಿದ್ದಾರೆ ಎಂದು ಸ್ಥಳೀಯ ಜೆ.ಎಂ.ಎಫ್ .ಸಿ ನ್ಯಾಯಾಲಯದ ಹಿರಿಯ ದಿವಾಣಿ ನ್ಯಾಯಾಧೀಶ ಸುನೀಲ್ ಎಸ್ . ತಳವಾರ ತಿಳಿಸಿದರು.
ಪಟ್ಟಣದ ಡಾ.ಬಿ.ಆರ್ .ಅಂಬೇಡ್ಕರ್ ಸರಕಾರಿ ಕಚೇರಿಗಳ ಸಂಕೀರ್ಣದ ಸಭಾಭವನದಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿಸೋಮವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಧೀಶೆ ಅಶ್ವಿನಿ ಚಂದ್ರಕಾಂತ ಮಾತನಾಡಿ, ಸಮಾಜದಲ್ಲಿಮಹಿಳೆಯರಿಗೆ ಪೂಜನೀಯ ಸ್ಥಾನವಿದೆ. ಸಮಾನತೆ ಮತ್ತು ಶಿಕ್ಷಣ ಸಿಕ್ಕರೆ ಮಹಿಳೆಯರು ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಣೇಶ ಲಿಂಗನಗೌಡ ಅಧ್ಯಕ್ಷತೆವಹಿಸಿ ಮಾತನಾಡಿದರು.
ನ್ಯಾಯವಾದಿ ಚೆನ್ನಮ್ಮ ಬನ್ನಿ ಮಾತನಾಡಿ, ವರದಕ್ಷಿಣೆ ನಿಷೇಧ ಕಾಯಿದೆ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಬಗ್ಗೆ ಮಾಹಿತಿ ನೀಡಿದರು. ನ್ಯಾಯವಾದಿ ವಸಂತ ಭಾಗೂರ ಮಾತನಾಡಿದರು. ಮೇಲ್ವಿಚಾರಕಿ ಶೈಲಜಾ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
2025-26ನೇ ಸಾಲಿನಲ್ಲಿವಯೋನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿಹೆಣ್ಣು ಮಕ್ಕಳ ಹಕ್ಕುಗಳು, ಮಹಿಳಾ ಸಹಾಯವಾಣಿ ಹಾಗೂ ವಿವಿಧ ಯೋಜನೆಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಲಲಿತಾ ಪಾಟೀಲ ಪ್ರಾರ್ಥಿಸಿದರು. ದೀಪಾ ಭಜಂತ್ರಿ ಸ್ವಾಗತಿಸಿದರು, ಜಯಶ್ರೀ ಕಾವಲಕೊಪ್ಪ ವಂದಿಸಿದರು. ಲಕ್ಷ್ಮಿಬಾಯಿ ಬಗಾಡೆ ನಿರೂಪಿಸಿದರು.
ಧಿಧಿ
ಪೋಟೋ ಪೈಲ್ ನೇಮ 17ಎಸ್ .ಜಿ.ಎನ್ .3
ಶಿಗ್ಗಾವಿ ಪಟ್ಟಣದಲ್ಲಿನಡೆದ ಅಂತರಾಷ್ಟಿ್ರೕಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜೆ.ಎಂ.ಎಫ್ .ಸಿ ನ್ಯಾಯಾಲಯದ ಹಿರಿಯ ದಿವಾಣಿ ನ್ಯಾಯಾಧೀಶ ಸುನೀಲ್ ಎಸ್ . ತಳವಾರ ಉದ್ಘಾಟಿಸಿದರು.
ಧಿಧಿ-

