ಸಂಕ್ಷಿಪ್ತ ಸುದ್ದಿಗಳು

Contributed byraju.manjunath67@gmail.com|Vijaya Karnataka

ರಾಮನಗರ ಜಿಲ್ಲೆಯಲ್ಲಿ ದೇವದಾಸಿಮಯ್ಯ ಜಯಂತಿ ಮತ್ತು ಭಗವಾನ್ ಮಹಾವೀರ ಜಯಂತಿ ಆಚರಣೆಗಾಗಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಸಭೆ ನಡೆಯಲಿದೆ. ಜಯಂತಿ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಚರ್ಚಿಸಲು ಎಲ್ಲ ಸಮುದಾಯದ ಮುಖಂಡರು, ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವುದನ್ನು ಖಂಡಿಸಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.

preliminary meeting for devara dasimayya and bhagwan mahavir jayanti on wednesday

ಸಂಕ್ಷಿಪ್ತ ಸುದ್ದಿಗಳು

ಇಂದು ಪೂರ್ವಭಾವಿ ಸಭೆ

ರಾಮನಗರ: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾ.23ರಂದು ದೇವರ ದಾಸಿಮಯ್ಯ ಜಯಂತಿ ಹಾಗೂ ಮಾ.31ರಂದು ಭಗವಾನ್ ಮಹಾವೀರ ಜಯಂತಿ ಆಚರಣೆ ಸಂಬಂಧ ಮಾ.18ರ ಬುಧವಾರ ಬೆಳಗ್ಗೆ 10.30ಕ್ಕೆ ದೇವರ ದಾಸಿಮಯ್ಯ ಜಯಂತಿ ಹಾಗೂ ಬೆಳಗ್ಗೆ 11.30ಕ್ಕೆ ಭಗವಾನ್ ಮಹಾವೀರ ಜಯಂತಿಯ ಪೂರ್ವಭಾವಿ ಸಭೆಯನ್ನು ನಗರದ ಕಂದಾಯ ಭವನದಲ್ಲಿಏರ್ಪಡಿಸಲಾಗಿದೆ. ಈ ಸಂಬಂಧ ಜಯಂತಿ ಕಾರ್ಯಕ್ರಮ ಆಚರಣೆಯ ರೂಪರೇಷೆಗಳ ಕುರಿತು ಚರ್ಚಿಸಲು ಜಿಲ್ಲೆಯ ಎಲ್ಲಾಸಮುದಾಯದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

------

ಲೋಕೋಪಯೋಗಿ ಸಚಿವರಲ್ಲಿಮನವಿ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾದ್ಯಂತ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಬಂರ್ ದಿಸಿರುವುದನ್ನು ಖಂಡಿಸಿ ಲೊಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಕಳೆದೊಂದು ವರ್ಷದಿಂದ ಈ ರೀತಿಯ ಕ್ರಮ ಕæೖಗೊಳ್ಳಲಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳಿಗೆ ಸಭೆಗಳನ್ನು ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಲಾಗಿದೆ. ಈ ವೇಳೆ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಹರೀಶ್ ಬಾಲು, TTಆ ಯುವ ಘಟಕ ರಾಜ್ಯಾಧ್ಯಕ್ಷರಾದ ಡಾ.ಜಿ. ಗೋವಿಂದಯ್ಯ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ , ಮುಖಂಡರಾದ ಕಿರಣ್ , ಆನಂದ್ , ಅಪ್ಪಗೆರೆ ಪ್ರದೀಪ್ , ಕೂಡ್ಲೂರು ಕಾಂತರಾಜು, ಇನ್ನಿತರರು ಹಾಜರಿದ್ದರು.

--------

ಫೋಟೊ:

17ಆರ್ ಎನ್ ಆರ್ ಎಂ4:

ಬೆಂಗಳೂರು ದಕ್ಷಿಣ ಜಿಲ್ಲಾದ್ಯಂತ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಬಂರ್ ದಿಸಿರುವುದನ್ನು ಖಂಡಿಸಿ ಲೊಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರಿಗೆ ಮನವಿ ಸಲ್ಲಿಸಲಾಯಿತು.