ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

Contributed bydjtrupti@gmail.com|Vijaya Karnataka

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ಒಂಬತ್ತು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 15,941 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯೂ ಸಹಕಾರ ನೀಡಲಿದೆ. ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ನಡೆಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು.

sslc exam 902889 students preparing for the examination

ವಿಕ ಸುದ್ದಿಲೋಕ ಬೆಂಗಳೂರು ರಾಜ್ಯದಲ್ಲಿಮಾ. 18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಏ. 2ರವರೆಗೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ 9,02,889 ವಿದ್ಯಾರ್ಥಿ ಗಳು ನೋಂದಣಿ ಮಾಧಿಡಿಧಿಕೊಂಡಿಧಿದ್ದಾರೆ. ಇಧಿದಧಿರಲ್ಲಿ8,12,855 ಮಂದಿ ಹೊಸಬರು, 62,845 ಮಂದಿ ಪುನರಾ ವರ್ತಿತ ಅಭ್ಯರ್ಥಿಗಳು ಹಾಗೂ 27,189 ಖಾಸಗಿ ಅಭ್ಯರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ. 15,941 ಪರೀಕ್ಷಾ ಕೇಂದ್ರಗಳಲ್ಲಿಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪರೀಕ್ಷೆ ನಡೆಯಲಿದೆ. ಅಕ್ರಮಗಳು ನಡೆಯದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿಗಾ ವಹಿಸಿದೆ. ಈಗಾಗಲೇ ಮಂಡಳಿಯ ವೆಬ್ ಸೈಟ್ ಮೂಲಕ ವಿದ್ಯಾರ್ಥಿ ಗಳಿಗೆ ಮಾದರಿ ಪ್ರಶ್ನೆಪತ್ರಿಕೆಗಳು, ನೀಲನಕ್ಷೆ ಒದಗಿಸಲಾಗಿದೆ. ಈಗ ಪ್ರಶ್ನೆಪತ್ರಿಕೆಗಳ ಸೋರಿಕೆ, ಪರೀಕ್ಷಾ ಕೇಂದ್ರದ ಸುತ್ತ ಅಕ್ರಮ ನಡೆಯದಂತೆ ಕ್ರಮ ವಹಿಸಿದ್ದು, ಪೊಲೀಸ್ ಇಲಾಖೆ ಕೂಡ ಸಹಕಾರ ನೀಡಲಿದೆ. ಮಾ. 18ರಂದು ಕನ್ನಡ ಭಾಷಾ ಪರೀಕ್ಷೆ ನಡೆಯ ಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿವಿದ್ಯಾರ್ಥಿ ಗಳಿಗೆ ಅಗತ್ಯ ಮೂಲ ಸೌಕರ್ಯ, ಕುಡಿ ಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸ ಲಾಗಿದೆ. ಸಾಮಾ ಜಿಕ ಜಾಲತಾಣ ಗಳಲ್ಲಿಪ್ರಶ್ನೆಪತ್ರಿಕೆ ಸೋರಿಕೆ, ಮಾರಾಟ ಕುರಿತು ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.