ಹೊಸದಿಲ್ಲಿ: ಅಫಘಾನಿಸ್ತಾನದ ಕಾಬೂಲ್ ನಲ್ಲಿನ ಓಮಿಡ್ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ಖಂಡಿಸಿದೆ. ಈ ದಾಳಿಯಲ್ಲಿಕನಿಷ್ಠ 400 ಜನ ಸಾವನ್ನಪ್ಪಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ‘ಅನಾಗರಿಕ ಮತ್ತು ಹೇಡಿತನದ ಕೃತ್ಯ’ ಎಂದು ಕರೆದಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ‘‘ಪಾಕಿಸ್ತಾನವು ಹತ್ಯಾಕಾಂಡವನ್ನು ಮಿಲಿಟರಿ ಕಾರ್ಯಾಚರಣೆಯಾಗಿ ಬಿಂಬಿಸಲು ಪ್ರಯತ್ನಿಸುಧಿತ್ತಿದೆ,’’ ಎಂದು ಕಿಡಿಕಾರಿದೆ. ‘‘ಇದು ಹೇಡಿತನದ ಕೃತ್ಯವಾಗಿದ್ದು, ಅಸಹ್ಯಕರ ಹಿಂಸಾಚಾರವಾಗಿದೆ. ಇದನ್ನು ಮಿಲಿಟರಿ ಟಾರ್ಗೆಟ್ ಎಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇದು ಹೆಚ್ಚಿನ ಸಂಖ್ಯೆಯ ನಾಗರಿಕರ ಜೀವಗಳನ್ನು ಬಲಿ ತೆಗೆದುಕೊಂಡಿದೆ,’’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತೀಕ್ಷ$್ಣವಾಗಿ ಪ್ರತಿಕ್ರಿಯೆ ನೀಡಿದೆ. ‘‘ಆಸ್ಪತ್ರೆಯ ಮೇಲಿನ ದಾಳಿಯು ಪಾಕಿಸ್ತಾನದ ಘೋರ ಆಕ್ರಮಣಕಾರಿ ಕೃತ್ಯ. ಅಫಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ದಾಳಿ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಬೆದರಿಕೆ,’’ ಎಂದು ಆಕ್ರೋಶ ಹೊರಹಾಕಿದೆ. ‘‘ವಿಶ್ವಾದ್ಯಂತ ಮುಸ್ಲಿಂ ಸಮುದಾಯಗಳಲ್ಲಿಶಾಂತಿ, ಆತ್ಮಾವಲೋಕನ ಮತ್ತು ಕರುಣೆಯ ಸಂದರ್ಭವಾದ ಪವಿತ್ರ ರಂಜಾನ್ ತಿಂಗಳಲ್ಲಿಈ ದಾಳಿ ನಡೆದಿರುವುದು ಖಂಡನೀಯ. ಆಸ್ಪತ್ರೆ ಮತ್ತು ಅದರ ರೋಗಿಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಧಿಕೊಳ್ಳುವುದನ್ನು ಸಮರ್ಥಿಸುವ ನೈತಿಕತೆ ಅವರಿಗಿಲ್ಲ,’’ ಎಂದು ಭಾರತ ಹೇಳಿದೆ. ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ 2,000 ಹಾಸಿಗೆ ಸೌಲಭ್ಯವಿರುವ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ400 ಮಂದಿ ಸಾವಿಗೀಡಾಗಿದ್ದು, 250 ಜನರು ಗಾಯಗೊಂಡಿದ್ದಾರೆ.

