ಡಿಧಿಡಿಧಿಪಿಯು ಜಿ.ಪಂ ಅಧೀನಕ್ಕಿಲ್ಲ

Contributed bynagappa.narayanappa@timesgroup.com|Vijaya Karnataka

ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಸಿಇಒಗಳ ಅಧೀನಕ್ಕೆ ವರ್ಗಾಯಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮೌಲ್ಯಮಾಪಕರ ಬಾಕಿ ಭತ್ಯೆಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಮಾರ್ಚ್ 20ರೊಳಗೆ ಬಾಕಿ ಭತ್ಯೆ ಪಾವತಿಯಾಗಲಿದೆ ಎಂದು ತಿಳಿಸಿದರು.

no proposal to transfer administration to zp ceos madhu bangarappa

ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾಉಪ ನಿರ್ದೇಶಕರ ಕಚೇರಿಗಳ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾಪಂಚಾಯಿತಿ ಸಿಇಒಗಳ ಅಧೀನಕ್ಕೆ ವರ್ಗಾಯಿಸುವ ಯಾವುದೇ ಪ್ರಸ್ತಾವ ಇಲ್ಲಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ನಲ್ಲಿಮಂಗಳವಾರ ಶೂನ್ಯವೇಳೆಧಿಯಲ್ಲಿ‘ವಿಜಯ ಕರ್ನಾಟಕ’ ದ ‘ಪಿಯು ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧಾರ’ ಎಂಬ ಸುದ್ದಿಯನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ನ ಪುಟ್ಟಣ್ಣ ಮತ್ತು ಜೆಡಿಎಸ್ ಎಸ್ .ಎಲ್ . ಬೋಜೇಗೌಡ, ‘‘ಯಾವುದೇ ಕಾರಣಕ್ಕೂ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾಉಪ ನಿರ್ದೇಶಕರ ಕಚೇರಿಗಳ ಆಡಳಿತಾತ್ಮಕ ನಿಯಂತ್ರಣವನ್ನು ಜಿ.ಪಂ ಸಿಇಒಗಳ ಅಧೀನಕ್ಕೆ ವರ್ಗಾಯಿಸಬಾರದು. ಮೌಲ್ಯಮಾಪಕರ ಬಾಕಿ ಭತ್ಯೆಯನ್ನು ಕೂಡಲೇ ಬಿಡುಗಡೆ ಮಾಡಬೇಕು,’’ ಎಂದು ಆಗ್ರಹಿಸಿದರು. ಇದಕ್ಕೆ ಸಚಿವರು, ‘‘ಸದ್ಯಕ್ಕೆ ಆ ರೀತಿಯ ಯಾವುದೇ ಪ್ರಸ್ತಾವನೆ ಇಲ್ಲ. ಮೌಲ್ಯಮಾಪಕರ ಗೌರವಧನ ಬಾಕಿ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಮಾ.20 ರೊಳಗೆ ಬಾಕಿ ಭತ್ಯೆ ಪಾವತಿಯಾಗಲಿದೆ,’’ ಎಂದು ಹೇಳಿದರು.