ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿರ್ಬಂಧಿಧಿಸಲು ಚಿಂತನೆ

Contributed bybeeresha.mahadeva@timesgroup.com|Vijaya Karnataka

ಚಾಮುಂಡಿಬೆಟ್ಟದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಹೊಸ ಯೋಜನೆ ರೂಪಿಸಲಾಗಿದೆ. ಬೆಟ್ಟದ ಕೆಳಗೆ ವಿಶಾಲವಾದ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗುವುದು. ಅಲ್ಲಿಂದ ದೇವಸ್ಥಾನಕ್ಕೆ ತಲುಪಲು ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗುವುದು. ಈ ಬಗ್ಗೆ ಸರ್ಕಾರವು ಪರಿಶೀಲನೆ ನಡೆಸುತ್ತಿದೆ. ಭಕ್ತರ ಅನುಕೂಲಕ್ಕೆ ಆದ್ಯತೆ ನೀಡಲಾಗುವುದು.

ban on private vehicles at chamundi hill collected milestones

ವಿಕ ಸುದ್ದಿಲೋಕ ಮೈಸೂರು ಚಾಮುಂಡಿಬೆಟ್ಟ ತಪ್ಪಲಿನಲ್ಲಿಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ ಬಳಿಕ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಿ, ಸಾರಿಗೆ ಸಂಸ್ಥೆಯ ಬಸ್ ಅಥವಾ ಪ್ರತ್ಯೇಕ ವಾಹನ ವ್ಯವಸ್ಥೆ ಮಾಧಿಡಧಿಲು ಚಿಂತನೆ ನಡೆದಿದೆ. ಚಾಮುಂಡೇಶ್ವರಿ ದೇವಿಯ ಸುಗಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಹಿಮವದ್ ಗೋಪಾಲ ಸ್ವಾಮಿ ಬೆಟ್ಟದ ಮಾದರಿಯಲ್ಲಿಚಾಮುಂಡಿ ಬೆಟ್ಟಕ್ಕೂ ಖಾಸಗಿ ವಾಹನ ನಿರ್ಬಂಧಿಸಬೇಕೆಂಬ ಪರಿಸರವಾದಿಗಳ ಮನವಿಯನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸದನದಲ್ಲಿಸರಕಾರದ ಗಮನಕ್ಕೆ ತಂದರು. ಈ ಬಗ್ಗೆ ಲಿಖಿತ ಉಧಿತ್ತರ ನೀಡಿರುವ ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ, ‘ಧಿ‘ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯವು ಪ್ರಮುಖ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದು, ದೇಶ-ವಿದೇಶಗಳಿಂದಲೂ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುತ್ತಾರೆ. ಆಷಾಢ ಮಾಸದಲ್ಲಿಶುಕ್ರವಾರಗಳಂದು ಲಕ್ಷಾಂತರ ಜನ ಬೆಟ್ಟಕ್ಕೆ ಬರುತ್ತಾರೆ. ದಸರಾ ಸಂದರ್ಭದಲ್ಲೂಭಾರಿ ಜನದಟ್ಟಣೆ ಉಂಟಾಗುತ್ತದೆ. ಹಾಗಾಗಿ ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ,’’ ಎಂದು ತಿಳಿಸಿದ್ದಾರೆ. ‘‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ2024ರ ಸೆ. 3ರಂದು ನಡೆದ ಸಭೆಯಲ್ಲಿಚಾಮುಂಡಿಬೆಟ್ಟದಲ್ಲಿವಾಹನ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿಚರ್ಚಿಸಿ, ಬೆಟ್ಟದ ಕೆಳಗೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲು ಸೂಕ್ತ ಸರಕಾರಿ ಜಮೀನು ಕಾಯ್ದಿರಿಸಲು ತೀರ್ಮಾನಿಸಲಾಗಿದೆ. 2025ರ ಡಿ. 2ರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿಯಲ್ಲಿಮೈಸೂರು ತಾಲೂಕು, ಕಸಬಾ ಹೋಬಳಿ, ಬಂಡಿಪಾಳ್ಯ ಸರ್ವೆ ನಂ.19ರಲ್ಲಿನ ಒಟ್ಟು 58.03 ಎಕರೆ ಜಮೀನಿನಲ್ಲಿದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಗಾಗಿ 5 ಎಕರೆ ಜಮೀನು ಕಾಯ್ದಿರಿಸಲು ನಿರ್ಧರಿಸಲಾಗಿದೆ. ಜಮೀನು ಕಾಯ್ದಿರಿಸಿದ ನಂತರ ಪ್ರಾಧಿಕಾರದ ವತಿಯಿಂದ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಭಕ್ತಾಧಿಗಳ ಅನುಕೂಲಕ್ಕಾಗಿ ಪ್ರಾಧಿಕಾರದ ವತಿಯಿಂದ ಮಿನಿ ಬಸ್ ಖರೀದಿಸಿ ಅಥವಾ ಸಾರಿಗೆ ಬಸ್ ಗಳನ್ನು ಪಾರ್ಕಿಂಗ್ ಸ್ಥಳದಿಂದ ಬೆಟ್ಟಕ್ಕೆ ಕಾರ್ಯಾಚರಣೆ ನಡೆಸಲು ಪರಿಶೀಲಿಸಲಾಗುವುದು,’’ ಎಂದು ವಿವರಿಸಿದ್ದಾರೆ. ‘ಧಿ‘ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಿ, ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಬಳಿಕ ಪ್ರಸ್ತುತ ಚಾಮುಂಡಿಬೆಟ್ಟದಲ್ಲಿರುವ ವಾಹನ ಪಾರ್ಕಿಂಗ್ ಕಟ್ಟಡವನ್ನು ಭಕ್ತಾಧಿಗಳ ಅನುಕೂಲಕ್ಕಾಗಿ ಬಳಸಿಕೊಳ್ಳಲಾಗುವುದು. ಕುಡಿಯುವ ನೀರು, ಶೌಚಗೃಹ, ಭದ್ರತೆ, ಅತ್ಯಾಧುನಿಕ ಸಿಸಿ ಟಿವಿ ಕ್ಯಾಮೆರಾ ವ್ಯವಸ್ಥೆ, ಸೂಕ್ತ ತಂಗು ದಾಣವನ್ನಾಗಿ ಪರಿವರ್ತಿಸಲು ಚಿಂತನೆ ನಡೆಸಲಾಗುವುದು,’’ ಎಂದು ತಿಳಿಸಿದ್ದಾರೆ.