ಬೆಂಗಳೂರು: ಬಿಸಿಲಿನ ಬೇಗೆ ನಡುವೆ ಕಳೆದೆರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಯಾಗುತ್ತಿದ್ದು, ಇನ್ನೂ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.18 ರಿಂದ 22 ರವರೆಗೆ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್ , ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಮಳೆಯಾಗುವ ಸಾಧ್ಯತೆಯಿದೆ ಎಂದು ಮುಧಿನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿಮುಂದಿನ 48 ಗಂಟೆಗಳಲ್ಲಿಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿಮಾ.25ರವರೆಗೆ ಮಳೆ ಮುಂದುವರಿಧಿಯುವ ಸಾಧ್ಯತೆಯಿದೆ. ಬೆಳಗಿನ ಅವಧಿಯಲ್ಲಿಕೆಲ ಜಿಲ್ಲೆಗಳಲ್ಲಿಶುಷ್ಕ ವಾತಾವರಣ ಇರಲಿದೆ.

