ಯುಗಾದಿ, ರಂಜಾನ್ ಪ್ರಯುಕ್ತ ವಿಶೇಷ ರೈಲು

Contributed bymahyurgh@gmail.com|Vijaya Karnataka

ಯುಗಾದಿ ಮತ್ತು ರಂಜಾನ್‌ ಹಬ್ಬಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನೈಋುತ್ಯ ರೈಲ್ವೆಯು ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಯಶವಂತಪುರದಿಂದ ಮಡಗಾಂವ್‌ಗೆ ಮತ್ತು ಅಲ್ಲಿಂದ ಬೆಂಗಳೂರು ಕಂಟೋನ್ಮೆಂಟ್‌ಗೆ ಈ ರೈಲುಗಳು ಸಂಚರಿಸಲಿವೆ. ಮಾರ್ಚ್ 20ರಂದು ಯಶವಂತಪುರದಿಂದ ಹೊರಟು, ಮಾರ್ಚ್ 22ರಂದು ಮಡಗಾಂವ್‌ನಿಂದ ಬೆಂಗಳೂರಿಗೆ ತಲುಪಲಿದೆ. ಹಲವು ಪ್ರಮುಖ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ನೀಡಲಿದೆ.

special trains for yugadi and ramadan yeshwantpur madgaon bengaluru

ಬೆಂಗಳೂರು: ಯುಗಾದಿ, ರಂಜಾನ್ ಹಿನ್ನೆಲೆಯಲ್ಲಿಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋುತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ - ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ. ಯಶವಂತಪುರ ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 20ರಂದು ಬೆಳಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು ಶನಿವಾರ ಬೆಳಗ್ಗೆ 6.45ಕ್ಕೆ ಮಡಗಾಂವ್ ತಲುಪಲಿದೆ. ವಾಪಸ್ಸಾಗುವ ರೈಲು ಮಾರ್ಚ್ 22ರಂದು ಬೆಳಗ್ಗೆ 11ಕ್ಕೆ ಮಡಗಾಂವ್ ನಿಂದ ಹೊರಟು ಸೋಮವಾರ ಬೆಳಗ್ಗೆ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.ಕುಣಿಗಲ್ , ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್ , ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್ , ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ , ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿಈ ರೈಲು ನಿಲ್ಲಲಿದೆ ಎಂದು ಪ್ರಕಟಣೆ ತಿಳಿಸಿದೆ.