ವಿಕ ಸುದ್ದಿಲೋಕ ಬೆಂಗಳೂರು 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬುಧವಾರ ರಾಜ್ಯಾದ್ಯಂತ ಸುಸೂತ್ರವಾಗಿ ಆರಂಭವಾಯಿತು. 2,870 ಕೇಂದ್ರಗಳಲ್ಲಿ8,16,294 (ಶೇ.98.53) ವಿದ್ಯಾರ್ಥಿಗಳು ಕನ್ನಡ, ಅರೇಬಿಕ್ ಪರೀಕ್ಷೆ ಬರೆದರು. ಈ ಬಾರಿ ಪರೀಕ್ಷೆಗೆ ನೋಂದಣಿಯಾಗಿದ್ದ 8,28,477 ವಿದ್ಯಾರ್ಥಿಗಳ ಪೈಕಿ 12,183 ವಿದ್ಯಾರ್ಥಿಗಳು ಗೈರಾಗಿದ್ದರು. ಬೆಂಗಳೂರು ಉತ್ತರ ವಲಯದಲ್ಲಿ44,520, ಬೆಂಗಳೂರು ದಕ್ಷಿಣ ವಲಯದಲ್ಲಿ56,890 ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ13,518 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದರು. ಕೋಲಾರ, ಚಾಮರಾಜನಗರ, ತುಮಕೂರು, ಉಡುಪಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮೈಸೂರು ಜಿಲ್ಲೆಗಳಲ್ಲಿಶೇ.98ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಅಕ್ರಮಗಳಿಗೆ ಅವಕಾಶ ನೀಡದಂತೆ ಎಲ್ಲಾಪರೀಕ್ಷಾ ಕೇಂದ್ರಗಳಲ್ಲಿಸಿಸಿ ಕ್ಯಾಮರಾ, ವೆಬ್ ಕಾಸ್ಟಿಂಗ್ ಮೂಲಕ ನಿಗಾ ಇಡಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಎಚ್ಚರ ವಹಿಸಲಾಗಿತ್ತು. ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ತೋರಿಸಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು.

