ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ ಫೆ. 28ರಿಂದ ಮಾ. 9ರವರೆಗೆ ಬ್ರಹ್ಮಶ್ರೀ ಎಡಪದವು ರಾಧಾಕೃಷ್ಣ ತಂತ್ರಿಗಳ ನೇತೃತ್ವದಲ್ಲಿನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.
ಅವರು ಬುಧವಾರ ದೇವಸ್ಥಾನದ ಆವರಣದಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.
ಫೆ. 28ರಂದು ಬೆಳಗ್ಗೆ 9.30ಕ್ಕೆ ಕ್ಷಮಾಯಾಚನ ಪ್ರಾರ್ಥನೆ ಪೂರ್ವಕ ಮುಷ್ಟಿ ಕಾಣಿಕೆ ಸೇವೆ, ಸಂಜೆ 5.30ರಿಂದ ಅಘೋರ ಹೋಮ ನಡೆಯಲಿದೆ. ಮಾ. 1ರಿಂದ ಪ್ರತಿದಿನ ಬೆಳಗ್ಗಿನಿಂದ ವೈದಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಜನಾ ಕಾರ್ಯಕ್ರಮ, ಸಂಜೆ ಗಂಟೆ 6.30ಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಮಠಾಧಿಪತಿಗಳು ಹಾಗೂ ಸಚಿವರ ಪಾಲ್ಗೊಳ್ಳುವಿಕೆಯಲ್ಲಿಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಮಾ. 1ರಂದು ಸಂಜೆ ಸೂರ್ಯವಂದನಾ ಭಜನೋತ್ಸವ ನಡೆಯಲಿದ್ದು, ಧಾರ್ಮಿಕ ಸಭೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ. ಪದ್ಮಪ್ರಸಾದ ಅಜಿಲ ಉದ್ಘಾಟಿಸಲಿದ್ದಾರೆ.
ವಿವಿಧ ಮಠಾಧೀಶರಿಂದ ಆಶೀರ್ವಚನ
ಮಾ. 2ರಂದು ಬೆಂಗಳೂರು ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀವಿಖ್ಯಾತನಂದ ಸ್ವಾಮೀಜಿ, 3ರಂದು ಮೂಡಬಿದಿರೆ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿ ಹಾಗೂ ಉಡುಪಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪೀಠಾಧಿಪತಿ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ, 4ರಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, 5ರಂದು ಶ್ರೀಧಾಮ ಮಾಣಿಲದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ, 6ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, 7ರಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಆಶೀರ್ವಚನ ನೀಡುವರು.
8ರಂದು ಸಾಮೂಹಿಕ ಸತ್ಯ ನಾರಾಯಣ ಪೂಜೆ, 9ರಂದು ರಾತ್ರಿ 8.30ಕ್ಕೆ ಕೊಡಮಣಿತ್ತಾಯ ದೈವದ ನೇಮ, 10ರಂದು ರಾತ್ರಿ 8 ರಿಂದ ಮೂಜಿಲ್ನಾಯ ಬೊಮ್ಮರ್ದಾಯ ಪಿಲ್ಚಂಡಿ ದೈವಗಳಿಗೆ ಬಲಿನೇಮ ಹಾಗೂ 14ರಂದು ಏಕಾಹೋರಾತ್ರಿ ಭಜನೋತ್ಸವ ನಡೆಯಲಿದೆ.

