ವಿಕ ಸುದ್ದಿಲೋಕ ಮಂಗಳೂರು
ದೇಶದ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿಎಸ್ ಸಿಡಿಸಿಸಿ ಬ್ಯಾಂಕ್ ಅಗ್ರಸ್ಥಾನದಲ್ಲಿದೆ. ಕೋರ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕ್ ನಂತಹ ಉತ್ಕೃಷ್ಟ ಬ್ಯಾಂಕಿಂಗ್ ವ್ಯವಸ್ಥೆಯ ಜತೆಗೆ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಮೂಲಕ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಸಹಕಾರಿ ಬ್ಯಾಂಕಿಂಗ್ ನಲ್ಲಿಅಳವಡಿಸಿರುವ ಎಸ್ ಸಿಡಿಸಿಸಿ ಬ್ಯಾಂಕ್ , ಡಾ.ಎಂ.ಎನ್ .ರಾಜೇಂದ್ರ ಕುಮಾರ್ ಅವರ ಸಮರ್ಥ ಅಧ್ಯಕ್ಷತೆಯಲ್ಲಿಗಣನೀಯ ಪ್ರಗತಿ ಕಂಡು ದೇಶಕ್ಕೆ ಮಾದರಿಯಾಗಿದೆ ಎಂದು ನಬಾರ್ಡ್ ಸಿಜಿಎಂ ಡಾ.ಸುರೇಂದ್ರ ಬಾಬು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಶನಿವಾರ ಭೇಟಿ ನೀಡಿದ ಅವರು ಬ್ಯಾಂಕ್ ನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಬ್ಯಾಂಕ್ ನ ಅಧಿಕಾರಿಗಳ ಜತೆ ಬ್ಯಾಂಕ್ ನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಮಾತನಾಡಿದರು.
ಎಸ್ ಸಿಡಿಸಿಸಿ ಬ್ಯಾಂಕ್ ದೇಶದ ಡಿಸಿಸಿ ಬ್ಯಾಂಕ್ ಗಳಲ್ಲಿಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಗ್ರಮಾನ್ಯ ಬ್ಯಾಂಕ್ . ಸಂಪೂರ್ಣ ಗಣಕೀಕೃತವಾಗಿರುವ ತನ್ನ 113 ಶಾಖೆಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಕೃಷಿ ಸಾಲ ವಿತರಣೆ ಹಾಗೂ ಮರುಪಾವತಿಯಲ್ಲಿಸಹಕಾರಿ ವ್ಯವಸ್ಥೆಗೆ ಮಾದರಿಯಾಗಿದ್ದು ಮಾತ್ರವಲ್ಲನಬಾರ್ಡ್ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲೂಮುಂಚೂಣಿಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ .ರಾಜೇಂದ್ರ ಕುಮಾರ್ ನಬಾರ್ಡ್ ಸಿಜಿಎಂ ಡಾ.ಸುರೇಂದ್ರ ಬಾಬು ಅವರನ್ನು ಸ್ವಾಗತಿಸಿ, ಬ್ಯಾಂಕ್ ನಡೆದು ಬಂದ ಪ್ರಗತಿಯ ಪರಿಚಯ ಮಾಡಿಕೊಟ್ಟರು. ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಯಲ್ಲೂಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿದೆ ಎಂದರು.
ನಬಾರ್ಡ್ ಸಿಜಿಎಂ ಡಾ.ಸುರೇಂದ್ರ ಬಾಬು ಅವರನ್ನು ಡಾ.ಎಂ.ಎನ್ .ರಾಜೇಂದ್ರ ಕುಮಾರ್ ಸನ್ಮಾನಿಸಿದರು. ಬ್ಯಾಂಕ್ ನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತ, ಡಿಜಿಎಂ ಜಗದೀಶ್ , ಬ್ಯಾಂಕ್ ನ ನಿರ್ದೇಶಕರಾದ ಎಂ.ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್ .ಕೋಟ್ಯಾನ್ , ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ .ಬಿ.ಜಯರಾಮ ರೈ, ಜೈರಾಜ್ ಬಿ.ರೈ, ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ಅಶೋಕ್ ಕುಮಾರ್ ಶೆಟ್ಟಿ, ಸದಾಶಿವ ಉಳ್ಳಾಲ್ , ರಾಜೇಶ್ ರಾವ್ , ಎಸ್ .ಎನ್ .ಮನ್ಮಥ, ಕುಶಾಲಪ್ಪ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಹಾಗೂ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.
ಫೊಟೋ: 1ಎಂ-ಎಸ್ ಸಿಡಿಸಿಸಿ

