ವಿಕ ಸುದ್ದಿಲೋಕ ಬೆಂಗಳೂರು ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳಕ್ಕೆ ಆಂಧ್ರ ಪ್ರದೇಶ ಸರಕಾರ ಅಡ್ಡಗಾಲು ಹಾಕುತ್ತಿದ್ದು, ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರಕ್ಕೆ ಪತ್ರ ಬರೆದಿದೆ. ಹಾಗಾಗಿ ಕೇಂದ್ರ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಈ ಹಿಂದೆ ಆಗಿರುವ ಆದೇಶದ ಪ್ರಕಾರ ನಡೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ
ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಸುದ್ದಿಗಾರರೊಂದಿಗೆ ಮಾತನಾಡಿ, ‘‘ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಿಸಲು ಅನುಮತಿ ನೀಡಧಿಬಾರದು ಹಾಗೂ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸ¸ಧಿಾರದು ಎಂದು ಆಂಧ್ರ ಸರಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಆಂಧ್ರ ಹಾಗೂ ಮಹಾರಾಷ್ಟ್ರ ಸರಕಾರದವರು ಈ ವಿಚಾರದಲ್ಲಿಮಧ್ಯಪ್ರವೇಶ ಮಾಡುವುದು ಒಳ್ಳೆಯದಲ್ಲ,’’ ಎಂದು ಹೇಳಿದರು. ‘‘ಮಾರ್ಚ್ 10ರಿಂದ ಸಂಸತ್ ಅಧಿವೇಶನ ಪ್ರಾರಂಭವಾಗಲಿದೆ. ಅದರ ಮಧ್ಯೆಯೇ ದಿಲ್ಲಿಗೆ ಹೋಗಿ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ. ಸರ್ವಪಕ್ಷ ನಿಯೋಗ ಕೊಂಡೊಯ್ಯಲು ತಯಾರಿ ಮಾಡಿಧಿಕೊಳ್ಳಧಿಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೂ ತರುತ್ತೇನೆ,’’ಎಂದು ತಿಳಿಸಿದರು.

