ಮಕ್ಕಳ ರಕ್ಷಣಾ ನೀತಿ ಕಡ್ಡಾಯ

Contributed byahobalapathy.narayanappa@timesofindia.com|Vijaya Karnataka

ಚಿತ್ರದುರ್ಗದಲ್ಲಿ ಮಕ್ಕಳ ರಕ್ಷಣಾ ನೀತಿ ಕುರಿತು ಪ್ರಾಚಾರ್ಯರಿಗೆ ತರಬೇತಿ ನೀಡಲಾಯಿತು. ಈ ನೀತಿ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಅನ್ವಯಿಸುತ್ತದೆ. ಮಕ್ಕಳ ಸುರಕ್ಷತೆ ಶಿಕ್ಷಣ ಸಂಸ್ಥೆಗಳ ಆದ್ಯತೆಯಾಗಬೇಕು. ದೌರ್ಜನ್ಯ ತಡೆಗಟ್ಟಲು ಅಧಿಕಾರಿಗಳು ಹಾಗೂ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು.

mandatory child protection policy applicable to all educational institutions

ತರಬೇತಿ ಕಾಧಿರ್ಯಾಧಿಗಾರ ಉದ್ಘಾಟನೆ | ‘ಅನುದಾನಿತ, ಅನುದಾನರಹಿತ ಸಂಸ್ಥೆಗಳಿಗೂ ಅನ್ವಯಿಸುತ್ತದೆ’(ಧಿಕಿಧಿಕ್ಕರ್ )

ಮಕ್ಕಳ ರಕ್ಷಣಾ ನೀತಿ ಕಡ್ಡಾಯ

=ಧಿ=ಧಿ=

ವಿಕ ಸುದ್ದಿಲೋಕ ಚಿತ್ರದುರ್ಗ

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಜಾರಿಯಾಗಿ ಒಂದು ದಶಕ ಕಳೆದಿದ್ದರೂ ಅನೇಕ ಶಿಕ್ಷಣ ಸಂಸ್ಥೆಗಳಲ್ಲಿಸಮರ್ಪಕವಾಗಿ ಅನುಷ್ಠಾನವಾಗದಿರುವುದು ವಿಷಾದನೀಯ. ಎಲ್ಲಶಿಕ್ಷಣ ಸಂಸ್ಥೆಗಳಲ್ಲಿಮಕ್ಕಳ ಸುರಕ್ಷತೆಗಾಗಿ ಜಾರಿಗೆ ತರಲಾಗಿರುವ ಮಕ್ಕಳ ರಕ್ಷಣಾ ನೀತಿ ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಧಿಳಿದರು.

ನಗರದ ಜಿಪಂ ಮಿನಿ ಸಭಾಂಗಣದಲ್ಲಿಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಹಾಗೂ ಮಕ್ಕಳ ರಕ್ಷಣೆ ಕಾಯ್ದೆ ಕುರಿತು ಡಿಪೊ್ಲಮಾ, ಪಾಲಿಟೆಕ್ನಿಕ್ , ಐಟಿಐ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಪ್ರಾಚಾರ್ಯರಿಗೆ ತರಬೇತಿ ಕಾಧಿರ್ಯಾಧಿಗಾರ ಉದ್ಘಾಟಿಸಿ, ಮಾತನಾಡಿದರು.

ರಾಜ್ಯದ ವಿವಿಧ ಜಿಲ್ಲೆಗಳ ಐಟಿಐ, ಪ್ಯಾರಾ ಮೆಡಿಕಲ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಭೇಟಿ ನೀಡಿದಾಗ, ಮಕ್ಕಳ ರಕ್ಷಣಾ ನೀತಿಯ ಬಗ್ಗೆ ಅನೇಕ ಪ್ರಾಚಾರ್ಯರಿಗೆ ಮಾಹಿತಿಯೇ ಇಲ್ಲದಿರುವುದು ಗಮನಕ್ಕೆ ಬಂದಿದೆ. ಈ ರಕ್ಷಣಾ ನೀತಿಯು ಕೇವಲ ಸರಕಾರಿ ಶಾಲೆಗಳಿಗೆ ಮಾತ್ರವಲ್ಲದೆ, ಅನುದಾನಿತ, ಅನುದಾನರಹಿತ ಸಂಸ್ಥೆಗಳು ಹಾಗೂ ಖಾಸಗಿ ಟ್ಯೂಷನ್ ಕೇಂದ್ರಗಳಿಗೂ ಅನ್ವಯಿಸುತ್ತದೆ ಎಂದರು.

ಈ ಹಿಂದೆ ಕೇವಲ ಶಿಕ್ಷಣ ಇಲಾಖೆಗೆ ಸೀಮಿತವಾಗಿದ್ದ ಮಕ್ಕಳ ರಕ್ಷಣಾ ನೀತಿ, ಈಗ ಆಯೋಗದ ಕ್ರಮದಿಂದಾಗಿ 11 ನಾಧಿನಾ ಇಲಾಖೆಗಳ ಮೂಲಕ 30 ಪುಟಗಳ ಸಮಗ್ರ ಸುತ್ತೋಲೆಯಾಗಿ ಹೊರಬಂದಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಮತ್ತು ಅವರಿಗೆ ಸುರಕ್ಷಿತ ವಾತಾವರಣ ಒದಗಿಸಲು ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾನಿರೂಪಣಾಧಿಕಾರಿ ಡಿ.ಮಂಜುನಾಥ್ , ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಜಗದೀಶ್ , ರಂಗನಾಥ್ , ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ಎ.ಎಂ.ವೀಣಾ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲೆಯ ಡಿಪೊ್ಲಮಾ, ಪಾಲಿಟೆಕ್ನಿಕ್ , ಐಟಿಐ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಪ್ರಾಚಾರ್ಯರು ಇದ್ದರು.

**

ಶಿಕ್ಷಣ ಸಂಸ್ಥೆಗಳ ಆದ್ಯತೆ ಆಧಿಗಲಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್ .ವಿಜಯಕುಮಾರ್ ಮಾತನಾಡಿ, 18 ವರ್ಷದೊಳಗಿನ ಎಲ್ಲಮಕ್ಕಳ ಸುರಕ್ಷತೆಯು ಶಿಕ್ಷಣ ಸಂಸ್ಥೆಗಳ ಆದ್ಯತೆಯಾಗಬೇಕು. ವಿಶೇಷವಾಗಿ ವಿದ್ಯಾರ್ಥಿನಿಲಯ ಮತ್ತು ಕಾಲೇಜುಗಳಲ್ಲಿಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು ಎಂದರು.

5ಸಿಟಿಡಿ40

ಚಿಧಿತ್ರಧಿದುರ್ಗ ನಗರದ ಜಿಪಂ ಮಿನಿ ಸಭಾಂಗಣದಲ್ಲಿಗುರುವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಹಾಗೂ ಮಕ್ಕಳ ರಕ್ಷಣೆ ಕಾಯ್ದೆ ತರಬೇತಿ ಕಾರ್ಯಾಗಾರದಲ್ಲಿಡಾ.ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿದರು.