ಕುಂದಾಪುರ : ಇಲ್ಲಿನ ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಎನ್ ಎಸ್ ಎಸ್ ಮತ್ತು ಎನ್ ಸಿಸಿ ಘಟಕಗಳ ಆಶ್ರಯದಲ್ಲಿಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿಜರುಗಿತು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಪ್ರಿನ್ಸಿಪಾಲ್ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಉಪಗವರ್ನರ್ ರಾಜೀವ ಕೋಟ್ಯಾನ್ , ಲಯನ್ಸ್ ಕ್ಲಬ್ ಅಧ್ಯಕ್ಷ ಸದಾನಂದ ನಾವಡ, ಕಾಲೇಜು ಆಡಳಿತ ಮಂಡಳಿಯ ಸದಸ್ಯ ಹುಂತ್ರಿಕೆ ಸುಧಾಕರ್ ಶೆಟ್ಟಿ ಆಶಯ ನುಡಿಗಳನ್ನಾಡಿದರು. ವೈಸ್ ಪ್ರಿನ್ಸಿಪಾಲ್ ಡಾ.ಚೇತನ್ ಶೆಟ್ಟಿ ಕೋವಾಡಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್ , ಖಜಾಂಚಿ ಶಿವರಾಮ ಶೆಟ್ಟಿ, ಲಯನ್ಸ್ ಕ್ಲಬ್ ಸದಸ್ಯ ಪ್ರಕಾಶ್ , ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ, ಎನ್ ಸಿಸಿ ಲೆಪ್ಟಿನೆಂಟ್ ಹರೀಶ್ ಬಿ. ಉಪಸ್ಥಿತರಿದ್ದರು.
ಯೋಗೀಶ್ ಶಾನುಭೋಗ್ ಸ್ವಾಗತಿಸಿದರು. ಪೃಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪೂಜಾ ಕುಂದರ್ ವಂದಿಸಿದರು. 238 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ದಾಖಲೆ ಬರೆಯಲಾಯಿತು..
ಪೋಟೊ//5ಕೆ-ಬಿಎಲ್ ಡಿ//. ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿರಕ್ತದಾನ ಶಿಬಿರ ಜರುಗಿತು.

