*ಎಸ್ಸಿ,ಎಸ್ಟಿಗೆ ಶೇ. 24.1 ಅನುದಾನಕ್ಕೆ ಆಗ್ರಹ

Contributed byphalalochanaradhya.ks@timesofindia.com|Vijaya Karnataka

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮುಂಬರುವ ಆಯವ್ಯಯದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಶೇ. 24.1 ರಷ್ಟು ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದೆ. ಒಳ ಮೀಸಲಾತಿ ಗೊಂದಲ ಸರಿಪಡಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ನೀಡಬೇಕು. ನಾಗರಿಕ ಹಕ್ಕುಗಳ ರಕ್ಷಣೆ ಕಾಯಿದೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

sc st 241 funding demand dalit committees appeal to the government

ಎಸ್ಸಿ,ಎಸ್ಟಿಗೆ ಶೇ. 24.1 ಅನುದಾನಕ್ಕೆ ಆಗ್ರಹ

-ದಸಂಸ ವತಿಯಿಂದ ಸಿಎಂಗೆ ಮನವಿ

ವಿಕ ಸುದ್ದಿಲೋಕ ಚಾಮರಾಜನಗರ

ಮುಂಬರುವ ರಾಜ್ಯ ಆಯವ್ಯಯದಲ್ಲಿಪರಿಶಿಷ್ಟ ಜಾತಿ, ಪಂಗಡ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಶೇ. 24.1 ಅನುದಾನವನ್ನು ಮೀಸಲಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘಷÜರ್ ಸಮಿತಿಯ ಜಿಲ್ಲಾಘಟಕದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಒಳ ಮೀಸಲಾತಿಯಲ್ಲಿಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲವನ್ನು ಸರಿಪಡಿಸಿ ಎಲ್ಲಾ101 ಪರಿಶಿಷÜ್ಟ ಜಾತಿಗೂ ಅನ್ಯಾಯವಾಗದಂತೆ ನೇಮಕಾತಿ ಮಾಡಲು ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ ಬಯಸಿ ಅರ್ಜಿ ಸಲ್ಲಿಸುವ ಎಲ್ಲಾಎಸ್ .ಸಿ, ಎಸ್ .ಟಿ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡಬೇಕು. ನಿರಂತರವಾಗಿ ಪಾಠ ಏರ್ಪಾಡಬೇಕು. ರಾಜ್ಯದಲ್ಲಿನಾಗರಿಕ ಹಕ್ಕುಗಳ ರಕ್ಷಣೆ ಕಾಯಿದೆ ಮತ್ತು ದೌರ್ಜನ್ಯ ತಡೆಕಾಯಿದೆಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ. ಪ್ರತಿ ಗ್ರಾಮದಲ್ಲಿದಲಿತರಿಗೆ ಸ್ಮಶಾನ ಭೂಮಿಯನ್ನು ಕಡ್ಡಾಯವಾಗಿ ಮೀಸಲಿರಿಸಬೇಕು,’’ ಎಂದು ಆಗ್ರಹಿಸಿದರು.

‘‘ ಎಸ್ .ಸಿ, ಎಸ್ .ಟಿ ಮೀಸಲು ನೀತಿಗೆ ನಿWದಿಪಡಿಸಿರುವ ಆದಾಯ ಮಿತಿ 15 ಲಕ್ಷ ರೂ.ಗೆ ಏರಿಸಬೇಕು. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡು ವೃತ್ತಿಗಳಲ್ಲಿಮೀಸಲು ನೀತಿಯನ್ನು ಅನುಷ್ಠಾನಕ್ಕೆ ತರಬೇಕು,’’ ಎಂದು ಒತ್ತಾಯಿಸಿದರು.

‘‘ನ್ಯಾಯಾಲಯಗಳ ನ್ಯಾಯಾಧೀಶರ ನೇಮಕಾತಿಯಲ್ಲಿಮೀಸಲಾತಿಯನ್ನು ಅನುಸರಿಸುವುದಕ್ಕೆ ಕೇಂದ್ರ ಸರಕಾರವನ್ನು ಒತ್ತಾಯಿಸುವುದು. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿಬರುವ ಎಲ್ಲಾನಿಗಮ ಮಂಡಳಿಗಳಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಎಸ್ .ಸಿ, ಎಸ್ .ಟಿ ಯ ಎಲ್ಲಾಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಬೇಕು,’’ ಎಂದು ಆಗ್ರಹಿಸಿದರು.

‘‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020, ಈ ಕೂಡಲೇ ರದ್ದು ಮಾಡಬೇಕು. ಎಸ್ಸಿಎಸ್ ಪಿ, ಟಿಎಸ್ ಪಿ ಹಣವನ್ನು ಬೇರೆ ಯೋಜನೆಗಳಿಗೆ ಬಳಸಬಾರದು ಹಾಗೂ ಈಗಾಗಲೇ ಬಳಸಿರುವ ಹಣವನ್ನು ವಾಪಸ್ ಅದೇ ಸಮುದಾಯದ ಅಭಿವೃದ್ಧಿಗೆ ಬಳಸಬೇಕು,’’ ಎಂದು ಒತ್ತಾಯಿಸಿದರು.

ಜಿಲ್ಲಾಸಂಘಟನಾ ಸಂಚಾಲಕ ಕಂದಹಳ್ಳಿ ನಾರಾಯಣ, ಭಾಗ್ಯಲಕ್ಷ್ಮೀ, ಮಲ್ಲರಾಜು, ಶಂಕರಮೂರ್ತಿ, ಆಟೋ ರಂಗಸ್ವಾಮಿ, ರಾಜಮ್ಮ, ಶಾಂತಮ್ಮ, ಕೆ.ಸಿ.ನಾಗರಾಜು, ದುಂಡಯ್ಯ, ಕಂದಹಳ್ಳಿ ಸೋಮಣ್ಣ, ಉಮೇಶ್ವರಿ, ನಾಗಮ್ಮ, ಮಹೇಶ್ , ಸೋಮಣ್ಣ ಹೊನ್ನೂರು, ಕೆಂಪರಾಜು ಇತರರು ಹಾಜರಿದ್ದರು.

===

ಆಯವ್ಯಯದಲ್ಲಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಜನಸಂಖ್ಯೆಯ ಆಧಾರದ ಮೇಲೆ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘಷÜರ್ ಸಮಿತಿ ಜಿಲ್ಲಾಶಾಖೆ ವತಿಯಿಂದ ಮನವಿ ಸಲ್ಲಿಸಲಾಯಿತು.