ವಿಷ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

Contributed byjohn.dsouza@timesofindia.com|Vijaya Karnataka

ಉಡುಪಿ ಕೊಳಲಗಿರಿಯ ಜಿಟಿಟಿಸಿ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿ ಮನೀಷ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸರಿಯಾಗಿ ಕಾಲೇಜಿಗೆ ಹೋಗದ ಕಾರಣ ಹೆತ್ತವರು ಬುದ್ಧಿಮಾತು ಹೇಳುತ್ತಿದ್ದರು. ಈ ಕಾರಣಕ್ಕೆ ಮನೆಯಲ್ಲಿ ಕಳೆನಾಶಕ ಸೇವಿಸಿದ್ದ. ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

student commits suicide by consuming poison in kolalagiri

ಕುಂದಾಪುರ : ಉಡುಪಿ ಕೊಳಲಗಿರಿಯ ಜಿಟಿಟಿಸಿ ಕಾಲೇಜಿನ ಡಿಪೊ್ಲೕಮಾ ವಿದ್ಯಾರ್ಥಿ ಮನೀಷ್ (16) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲೂಕಿನ ಕೆರಾಡಿ ಗ್ರಾಮದ ಹಯ್ಯಂಗಾರು ಹೊಸಮನೆ ನಿವಾಸಿ ಮಂಜುನಾಥ್ ಅವರ ಪುತ್ರ. ಈತ ಇತ್ತೀಚೆಗೆ ಸರಿಯಾಗಿ ಕಾಲೇಜಿಗೆ ಹೋಗದ ಕಾರಣ ಹೆತ್ತವರು ಬುದ್ಧಿಮಾತು ಹೇಳುತ್ತಿದ್ದರು. ಇದೇ ಕಾರಣಕ್ಕೆ ಫೆ.16ರಂದು ಮನೆಯಲ್ಲಿರುವಾಗ ಕಳೆನಾಶಕ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ. ಚಿಕಿತ್ಸೆಯ ಬಗ್ಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ. ಕೊಲ್ಲೂರು ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

‰‰‰‰‰