‘ಆಯುರ್ವೇದ ಸಂಶೋಧನೆಗಳು ವ್ಯಾಪಾರ ಅವಕಾಶಗಳಾಗಿ ರೂಪುಗೊಳ್ಳಲಿ’

Contributed byvkbedra@gmail.com|Vijaya Karnataka

ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ನಡೆದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಆಯುರ್ವೇದ ಸಂಶೋಧನೆಗಳನ್ನು ವ್ಯಾಪಾರ ಅವಕಾಶಗಳಾಗಿ ರೂಪಿಸುವ ಬಗ್ಗೆ ಚರ್ಚಿಸಲಾಯಿತು. ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀ ನಾರಾಯಣ ಶೆಣೈ ಅವರು ಸಂಶೋಧನೆಗಳು ಸಮಾಜಕ್ಕೆ ಉಪಯೋಗವಾಗಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸಂಶೋಧನೆಗಳನ್ನು ವಿಶ್ವಕ್ಕೆ ಪರಿಚಯಿಸುವ ಅಗತ್ಯವನ್ನು ಒತ್ತಿ ಹೇಳಿದರು.

ayurveda research new avenues for business development

ವಿಕ ಸುದ್ದಿಲೋಕ, ಮೂಡುಬಿದಿರೆ

ಆಯುರ್ವೇದದಲ್ಲಿನಡೆಯುತ್ತಿರುವ ಸಂಶೋಧನೆಗಳು ಸಮಾಜಕ್ಕೆ ಉಪಯೋಗವಾಗುವ ಹಾಗೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡಬಲ್ಲಸಂಶೋಧನೆಯಾಗಬೇಕು ಎಂದು ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀ ನಾರಾಯಣ ಶೆಣೈ ಹೇಳಿದರು.

ಅವರು ಆಳ್ವಾಸ್ ಆಯುರ್ವೇದ ಕಾಲೇಜಿನ ಆತ್ಮ ಸಂಶೋಧನಾ ಕೇಂದ್ರ, ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿಆಯೋಜಿಸಿದ್ದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಅಲೋಕ 2026 ನ್ನು ಉದ್ಘಾಟಿಸಿ, ಮಾತನಾಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆಯುರ್ವೇದ ಕ್ಷೇತ್ರದ ಸಂಶೋಧನೆಗಳನ್ನು ದಾಖಲೆಗಳ ಮೂಲಕ ವಿಶ್ವಕ್ಕೆ ಪರಿಚಯಿಸಿ, ಅವುಗಳನ್ನು ವ್ಯಾಪಾರ ಕ್ಷೇತ್ರಕ್ಕೂ ತಲುಪಿಸಬೇಕಾಗಿದೆ ಎಂದರು.

ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ವತಿಯಿಂದ ಡಾ. ಎಂ. ಮೋಹನ ಆಳ್ವ ಅವರನ್ನು ಗೌರವಿಸಲಾಯಿತು. ನಾನಾ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ನಂತರದ ಅಧಿವೇಶನಗಳನ್ನು ನಡೆಸಿಕೊಟ್ಟರು. ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸುಶೀಲ್ ಶೆಟ್ಟಿ, ಮೈಸೂರಿನ ನ್ಯಾಷನಲ್ ಇನ್ಸಿ$್ಟಟ್ಯೂಟ್ ಆಫ್ ಇಂಜಿನಿಯರಿಂಗ್ ನ ಮುಖ್ಯಸ್ಥ ಪ್ರೊ. ಶ್ರೀನಾಥ್ ರಾಮ್ಪೂರೆ, ಆತ್ಮ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಸುಬ್ರಮಣ್ಯ ಪದ್ಯಾಣ ಸ್ನಾತಕೋತ್ತರ ವಿಭಾಗದ ಡೀನ್ ಮಂಜುನಾಥ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ ಗೀತಾ ಮಾರ್ಕಂಡೇಯ ನಿರೂಪಿಸಿ, ಡಾ ಸುಮಂತ ಶೆಣೈ ವಂದಿಸಿದರು.

ಚಿತ್ರ : 06 ಎಂಡಿಬಿ ಆಯುರ್ವೇದ