Budget 2023 New Efforts For Comprehensive Development Of Karnataka
ಬಜೆಟ್ ಪ್ರತಿಕ್ರಿಯೆ (2)
Contributed by: Vinayaka Naik P|Vijaya Karnataka•
ರಾಜ್ಯ ಬಜೆಟ್ ಜನತೆಗೆ ಭರವಸೆ ನೀಡಿದೆ. ಕೃಷಿ, ನೇಮಕಾತಿ, ಆರ್ಥಿಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. 54 ಸಾವಿರ ಸರ್ಕಾರಿ ಹುದ್ದೆಗಳ ನೇಮಕಕ್ಕೆ ಒತ್ತು ನೀಡಲಾಗಿದೆ. ಮಹಿಳಾ ಸಬಲೀಕರಣ, ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದೆ. ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಮತ್ಸ್ಯದರ್ಶಿನಿ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಸಾಮಾನ್ಯರಿಗೆ ಭರವಸೆ ನೀಡುವಂತಿದೆ. ಉದ್ಯೋಗ ಸೃಷ್ಟಿಗೆ 54 ಸಾವಿರ ಸರಕಾರಿ ಹುದ್ದೆಗಳ ನೇಮಕಕ್ಕೆ ಒತ್ತು ನೀಡಲಾಗಿದೆ. ಕೃಷಿ, ನೇಮಕಾತಿ, ಆರ್ಥಿಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ವಿಕಸಿತ್ ಭಾರತ-2047ಕ್ಕೆ ಪೂರಕವಾಗಿ ಸಮಗ್ರ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಕೋನ, ಸಮ ಸಮಾಜ ನಿರ್ಮಾಣ, ಮಹಿಳಾ ಸಬಲೀಕರಣ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಹಾಗೂ ದಾವಣಗೆರೆಯಲ್ಲಿ ಮತ್ಸ್ಯದರ್ಶಿನಿ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದು ವಿವಿಧ ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.
"ಜನತೆಗೆ ಭರವಸೆಯ ಭರಪೂರ ಕೊಡುಗೆ ನೀಡುವ ಮೂಲಕ ಸರ್ವರನ್ನೂ ತೃಪ್ತಿಪಡಿಸುವ ಪ್ರಯಾಸದ ಬಜೆಟ್ ಇದಾಗಿದೆ. ಉದ್ಯೋಗ ಸೃಷ್ಟಿಗೆ 54 ಸಾವಿರ ಸರಕಾರಿ ಹುದ್ದೆಗಳ ನೇಮಕಕ್ಕೆ ಒತ್ತು ನೀಡಿದ್ದು ಇದು ಕಾರ್ಯರೂಪಕ್ಕೆ ಬರಬೇಕಾಗಿದೆ," ಎಂದು ಜಿಲ್ಲಾವಕೀಲರ ಸಂಘದ ಮಾಜಿ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಹೇಳಿದ್ದಾರೆ."ಬಜೆಟ್‌ನಲ್ಲಿ ಕೃಷಿ, ನೇಮಕಾತಿ, ಆರ್ಥಿಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇವುಗಳ ಪ್ರಸ್ತಾಪದ ಜೊತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಶಿಕ್ಷಕರ ನೇಮಕಾತಿ ಜೊತೆಗೆ ಶಾಲಾ- ಕಾಲೇಜುಗಳ ಭೌತಿಕ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕಿತ್ತು," ಎಂದು ದಾವಣಗೆರೆ ವಿವಿ ಪ್ರಾಧ್ಯಾಪಕ ಶಿವಕುಮಾರ್ ಕಣಸೋಗಿ ತಿಳಿಸಿದ್ದಾರೆ.
"ವಿಕಸಿತ್ ಭಾರತ- 2047ಕ್ಕೆ ಪೂರಕವಾದ ಸಮಗ್ರ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ಸಮ ಸಮಾಜದ ನಿರ್ಮಾಣಕ್ಕೆ ಪ್ರಯತ್ನಿಸುವುದರೊಂದಿಗೆ ಮಹಿಳಾ ಸಬಲೀಕರಣ ಮತ್ತು ಶಿಕ್ಷಣ ಸೇರಿ ಎಲ್ಲಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ," ಎಂದು ರಾಜ್ಯಶಾಸ್ತ್ರ ವಿಭಾಗ, ದಾವಿವಿ ಅಧ್ಯಕ್ಷ ಡಾ.ಅಶೋಕ್ ಕುಮಾರ್ ಪಾಳೇದ ಅಭಿಪ್ರಾಯಪಟ್ಟಿದ್ದಾರೆ.
"ಸಿಎಂ ಸಿದ್ದರಾಮಯ್ಯ ಜನಪರ ಬಜೆಟ್ ಮಂಡಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಘೋಷಿಸಿರುವುದು, ದಾವಣಗೆರೆಯಲ್ಲಿ ಮತ್ಸ್ಯದರ್ಶಿನಿ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ," ಎಂದು ಕಾಂಗ್ರೆಸ್ ಯುವ ಮುಖಂಡ ಬಿ.ನಿಂಗರಾಜ್ ಹೇಳಿದ್ದಾರೆ.