ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಬಿಜೆಪಿ ಮುಖಂಡರ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿತಪ್ಪು ಮಾಹಿತಿ ಹಂಚಿಕೊಂಡಿದ್ದ ಆರೋಪ ಸಂಬಂಧ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಎಫ್ ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ
ಎಫ್ ಐಆರ್ ಮತ್ತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ಯನ್ನು ಗುರುವಾರ ಪಧಿರಿಧಿಶೀಧಿಲಿಧಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿತು. ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು ದಾಖಲಿಸಿರುವ ಎಫ್ ಐಆರ್ ಗೆ ತಡೆಯಾಜ್ಞೆ ನೀಡಿತು. ಜತೆಗೆ, ಅರ್ಜಿಯಲ್ಲಿಪ್ರತಿವಾದಿಗಳಾದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಮತ್ತು ಪ್ರಕರಣ ಸಂಬಂಧ ಖಾಸಗಿ ದೂರು ದಾಖಲಿಸಿರುವ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೂಡಘಟ್ಟಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಪ್ರಕರಣದ ಹಿನ್ನೆಲೆ: ಹುಬ್ಬಳ್ಳಿಯ ಪೊಲೀಸರು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನು 31 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದರು. ಅದನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕದಿಂದ ಪ್ರತಿಭಟನೆಗಳು ನಡೆದಿದ್ದವು. ಧರಣಿಯಲ್ಲಿಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ವಿ. ಸುನಿಲ್ ಕುಮಾರ್ , ಕೆ.ಎಸ್ . ಈಶ್ವರಪ್ಪ, ಪ್ರತಾಪ್ ಸಿಂಹ, ಸಿ.ಟಿ. ರವಿ ಸೇರಿ ಹಲವು ಮುಖಂಡರು ‘ನಾನೂ ಕರಸೇವಕ; ನನ್ನನ್ನು ಬಂಧಿಸಿ’ ಎಂಬುದಾಗಿ ಭಿತ್ತಿಪತ್ರ/ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಈ ಕುರಿತು ವಿಶೇಷ ನ್ಯಾಯಾಲಯಕ್ಕೆ ಯೋಗೇಂದ್ರ ಹೂಡಘಟ್ಟ ಖಾಸಗಿ ದೂರು ಸಲ್ಲಿಸಿ, ಬಿಜೆಪಿ ನಾಯಕರ ಚಿತ್ರಗಳನ್ನು ತಿರುಚಿ ಕಾಂಗ್ರೆಸ್ ಪಕ್ಷವು ಮತ್ತು ಡಿ.ಕೆ.ಶಿವಕುಮಾರ್ ಅವರ ‘ಎಕ್ಸ್ ’ ಖಾತೆಯಲ್ಲಿಹಂಚಿಕೊಳ್ಳಲಾಗಿದೆ.

