ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ

Contributed bydjtrupti@gmail.com|Vijaya Karnataka

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿ ಆರಂಭಿಸಿದೆ. ಪರೀಕ್ಷೆಯ ಭಯ ಮತ್ತು ಗೊಂದಲ ನಿವಾರಿಸಲು ಈ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಮಾ.10 ರಿಂದ 19 ರವರೆಗೆ ಪ್ರತಿದಿನ ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆವರೆಗೆ ಕರೆ ಮಾಡಬಹುದು. ಭಾನುವಾರವೂ ಸಹಾಯವಾಣಿ ಲಭ್ಯವಿರುತ್ತದೆ. 080-23310075 ಹಾಗೂ 080-23310076 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

new helpline for sslc students in karnataka alleviating exam fear

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧಿತ ಗೊಂದಲ ಹಾಗೂ ಪರೀಕ್ಷೆ ಬಗೆಗಿನ ಭಯ ನಿವಾರಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿ ಆರಂಭಿಸಿದೆ. ಪರೀಕ್ಷೆಗೆ ಸಜ್ಜಾಗುತ್ತಿರುವ ವಿದ್ಯಾರ್ಥಿ ಗಳು ಹಾಗೂ ಪೋಷಕರು ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸಹಾಯವಾಣಿಗೆ ಕರೆ ಮಾಡಬಹುದು ಎಂದು ಮಂಡಳಿ ತಿಳಿಸಿದೆ. ಮಾ.10 ರಿಂದ 19 ರವರೆಗೆ ಪ್ರತಿದಿನ ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆವರೆಗೆ ಸಹಾಯವಾಣಿ ಕಾರ್ಯ ನಿರ್ವ ಹಿಸಲಿದೆ. ಭಾನುವಾರ ಬೆಳಗ್ಗೆ 11ರಿಂದ ಸಂಜೆ 5 ಗಂಟೆವರೆಗೆ ಸಹಾಯವಾಣಿ ತೆರೆದಿರಲಿದೆ. 080-23310075 ಹಾಗೂ 080-23310076 ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲಗಳಿಗೆ ಉತ್ತರ ಪಡೆಯಬಹುದಾಗಿದೆ. ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈಗಾಗಲೇ ಮಂಡಳಿಯಿಂದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಒದಗಿಸಲಾಗಿದೆ. ವಿದ್ಯಾರ್ಥಿ ಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಸಹಾಯವಾಣಿ ಮೂಲಕ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ತಿಳಿಸಿದ್ದಾರೆ.