ಕಿರಣ್ ಸಣ್ಣಪ್ಪ ರಾಜ್ಯಕ್ಕೆ ಮೊದಲು
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗವು(ಯುಪಿಎಸ್ಸಿ) 2025ನೇ ಸಾಲಿನ ನಾಗರಿಕ ಸೇವಾ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಮೊದಲ ರಾರ ಯಂಕ್ ಪಡೆದು ದೇಶಕ್ಕೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ತಮಿಳುನಾಡಿನ ರಾಜೇಶ್ವರಿ ಸುವೆ ಎಂ. ಹಾಗೂ ರೋಹ್ತಕ್ ನ ಆಕಾಶ್ ಧುಲ್ ಕ್ರಮವಾಗಿ ಎರಡನೇ ಹಾಗೂ ಮೂರನೇ ರಾರ ಯಂಕ್ ಗಳಿಸಿದ್ದಾರೆ.
ರಾಜ್ಯದ ಒಟ್ಟು 22 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯುವಕ ಕಿರಣ್ ಸಣ್ಣಪ್ಪ ಕಮತೆ (29) ಅವರು ದೇಶಕ್ಕೆ 53ನೇ ರಾರ ಯಂಕ್ ಹಾಗೂ ರಾಜ್ಯಕ್ಕೆ ಮೊದಲ ರಾರ ಯಂಕ್ ಪಡೆದಿದ್ದಾರೆ.
ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ್ , ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿಸಹಾಯಕ ಎಂಜಿನಿಯರ್ ಆಗಿದ್ದಾರೆ. ಐದು ಬಾರಿ ಪ್ರಿಲಿಮ್ಸ… ಪಾಸಾಗಿದ್ದರೂ ಮೇನ್ಸ್ ಪರೀಕ್ಷೆಯಲ್ಲಿವಿಫಲವಾಗಿದ್ದರು. ಆರನೇ ಬಾರಿಗೆ ಯಶಸ್ಸು ಕಂಡಿದ್ದಾರೆ.

