ಮಹಿಳಾ ಸಬಲೀಕರಣ ಮಾಹಿತಿ ಕಾರ್ಯಾಗಾರ

Contributed byganeshaprasadapandelu@gmail.com|Vijaya Karnataka

ವಿಟ್ಲದ ಕನ್ಯಾನ ಸರಕಾರಿ ಪದವಿ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಮತ್ತು ಹಕ್ಕುಗಳ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ವರದಕ್ಷಿಣೆ, ಲೈಂಗಿಕ ಕಿರುಕುಳ, ಹೆಣ್ಣು ಶಿಶು ಹತ್ಯೆಗಳ ಬಗ್ಗೆ ಉಪನ್ಯಾಸಕಿ ಅನುಪಮಾ ಮಾಹಿತಿ ನೀಡಿದರು. ಕಾಲೇಜಿನ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿ ಶರಣ್ಯ ಸ್ವಾಗತಿಸಿದರು, ಶ್ರಾವಣ್ಯ ವಂದಿಸಿದರು. ಇಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

women empowerment information workshop sharing knowledge beyond womens rights

ವಿಟ್ಲ: ವಿದ್ಯಾರ್ಥಿಗಳಲ್ಲಿಮಹಿಳಾ ಸಬಲೀಕರಣ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಮಾಹಿತಿ ಕಾರ್ಯಕ್ರಮ ಕನ್ಯಾನ ಸರಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ವಿಮೆನ್ ಸೆಲ್ ವತಿಯಿಂದ ನಡೆಯಿತು.

ರಾಜ್ಯಶಾಸ್ತ್ರ ಉಪನ್ಯಾಸಕಿ ಅನುಪಮಾ ಸಾಮಾಜಿಕ ಸಮಸ್ಯೆಗಳಾದ ವರದಕ್ಷಿಣೆ, ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ, ಹೆಣ್ಣು ಶಿಶು ಮತ್ತು ಭ್ರೂಣ ಹತ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಸವಿತಾ, ಚೈತ್ರಾ, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶರಣ್ಯ ಸ್ವಾಗತಿಸಿದರು. ಶ್ರಾವಣ್ಯ ವಂದಿಸಿದರು. ಇಶ್ಮಿತಾ ಕಾರ್ಯಕ್ರಮ ನಿರೂಪಿಸಿ ದರು.

0603ವಿಟಿಎಲ್ ಕನ್ಯಾನ