ಆಂಜನೇಯ ದೇವಸ್ಥಾನ ಅಭಿವೃದ್ಧಿಗೆ ಗ್ಯಾರಂಟಿ ಹಣ
ವಿಕ ಸುದ್ದಿಲೋಕ ನ್ಯಾಮತಿ
ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿಯ ಯೋಜನೆಯ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಅಧ್ಯಕ್ಷ ಶಾಮನೂರು ಟಿ.ಬಸವರಾಜ್ ಹೇಳಿದರು.
ತಾಲೂಕಿನ ಮಲ್ಲಿಗೆನಹಳ್ಳಿ ಗ್ರಾಮದಲ್ಲಿತಾಲೂಕು ಗ್ಯಾರಂಟಿ ಸಮಿತಿಯಿಂದ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಕಾಂಗ್ರೆಸ್ ಪಕ್ಷ ಕೊಟ್ಟಿರುವ ಭರವಸೆಯಂತೆ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಮಧ್ಯಮ ವರ್ಗದ ಬಡ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಿದೆ. ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಗೃಹಲಕ್ಷ್ಮೀಯೋಜನೆಯಿಂದ ಬಂದ ಹಣ ನೀಡಿ ನಮ್ಮ ಜಿಲ್ಲೆರಾಜ್ಯಕ್ಕೆ ಮಾದರಿ ಆಗಿದೆ’ ಎಂದರು.
ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಎಸ್ .ಕೆ. ತೀರ್ಥಲಿಂಗಪ್ಪ ಬೆಳಗುತ್ತಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಅಸಹಾಯಕ ಮತ್ತು ಬಡ ಕುಟುಂಬಗಳಿಗೆ ವರದಾನವಾಗಿವೆ ಎಂದರು.
ಜಿಲ್ಲಾಶಿಶು ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜನಾಯ್ ್ಕ, ಜಿಲ್ಲಾಗ್ಯಾರಂಟಿ ಸಮಿತಿ ಸದಸ್ಯ ಗಿರೀಶ್ , ಆಂಜನೇಯಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಜಿ. ಬಸವರಾಜಪ್ಪ, ಜಿ.ಎಚ್ . ಪರಮೇಶ್ವರಪ್ಪ, ಶಿಶು ಮತ್ತು ಮಹಿಳಾ ಅಭಿವೃದ್ಧಿ ಯೋಜನಾಧಿಕಾರಿ ಜ್ಯೋತಿ, ಗ್ರಾ ಪಂ ಮಾಜಿ ಉಪಾಧ್ಯಕ್ಷ ಎಲ್ .ನಾಗರಾಜ್ ಮಾತನಾಡಿದರು.
ಗ್ರಾಪಂ ಮಾಜಿ ಸದಸ್ಯರಾದ ಹನುಮಂತಪ್ಪ, ಯಶೋಧಮ್ಮ, ಪಿಡಿಒ ಮಂಜುನಾಥಚಾರ್ , ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ, ಮಹಿಳೆಯರು, ಗ್ರಾಮಸ್ಥರು ಇದ್ದರು.
----
8ಎನ್ ಎಂಟಿ2
ನ್ಯಾಮತಿ ತಾಲೂಕಿನ ಮಲ್ಲಿಗೆನಹಳ್ಳಿ ಗ್ರಾಮದಲ್ಲಿಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಮನೂರು ಬಸವರಾಜ್ ಉದ್ಘಾಟಿಸಿದರು.

