ವಿಕ ಸುದ್ದಿಲೋಕ ನೆಲ್ಯಾಡಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ , ಕಡಬ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಕೊಣಾಲು ಸರಕಾರಿ ಪ್ರೌಢಶಾಲೆಯಲ್ಲಿ10ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿದ್ದ ಉಚಿತ ಟ್ಯೂಷನ್ ಕ್ಲಾಸ್ ನ ಸಮಾರೋಪ ಸಮಾರಂಭ ಶಾಲಾ ಆವರಣದಲ್ಲಿನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಶಿಕ್ಷಕ ಶಶಿಧರ್ ಶೆಟ್ಟಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್ ಗಳನ್ನು ಒದಗಿಸಿರುವುದು ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಬಹಳಷ್ಟು ಪ್ರಯೋಜನಕಾರಿ ಆಗಿದೆ. ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆಗೆ ಉತ್ತೇಜನ ನೀಡುವ ಜತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೂ ಈ ರೀತಿಯ ಕಾರ್ಯಕ್ರಮಗಳು ಸಹಕಾರಿ ಎಂದರು.
ಸಂಪನ್ಮೂಲ ವ್ಯಕ್ತಿ, ಜೇಸಿಐ ನ ಪೂರ್ವಾಧ್ಯಕ್ಷೆ ಸುಚಿತ್ರ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೇಗೆ ಸಿದ್ಧರಾಗಬೇಕು ಎಂಬ ಬಗ್ಗೆ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿನಿ ದೀಕ್ಷಾ ಉಚಿತ ಟ್ಯೂಷನ್ ಕ್ಲಾಸ್ ಮೂಲಕ ಸಿಕ್ಕಿರುವ ಸೌಲಭ್ಯ ಹಾಗೂ ಅದರ ಪ್ರಯೋಜನಗಳ ಕುರಿತು ಅನಿಸಿಕೆ ಹಂಚಿಕೊಂಡರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಪ್ರಾಸ್ತಾವಿಕ ಮಾತನಾಡಿದರು.
ಶಾಲಾ ಶಿಕ್ಷಕಿ ರಮಣಿ, ಒಕ್ಕೂಟದ ಅಧ್ಯಕ್ಷ ಲಿತಿನ್ , ಎಸ್ ಡಿಎಂಸಿ ಅಧ್ಯಕ್ಷ ಕಮಲಾಕ್ಷ, ಟ್ಯೂಷನ್ ಶಿಕ್ಷಕಿ ಸಂಧ್ಯಾ ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕ ಬಾಲಕೃಷ್ಣ ಸ್ವಾಗತಿಸಿದರು. ಶಿಕ್ಷಕ ಶಾಂತ ರಾಮ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ನೀರಜಾ ವಂದಿಸಿದರು.
ಶಾಲಾ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿಭಾಗವಹಿಸಿದ್ದರು. ಸೇವಾ ಪ್ರತಿನಿಧಿ ಪ್ರತಿಮಾ ಕಾರ್ಯಕ್ರಮ ಸಂಘಟಿಸಿದ್ದರು.
ಫೋಟೋ :08ಕೆಎನ್ ಕೊಣಾಲು 1
(ಸಂಪನ್ಮೂಲ ವ್ಯಕ್ತಿ ,ಜೇಸಿಐ ಪೂರ್ವಾಧ್ಯಕ್ಷೆ ಸುಚಿತ್ರ ಮಾತನಾಡಿದರು.)

