ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ
ಮಹಿಳೆ ಮುಖ್ಯವಾಹಿನಿಗೆ ಬರಲಿ
ವಿಕ ಸುದ್ದಿಲೋಕ ಹಾನಗಲ್ಲ
ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸದೇ ಸಮಾಜದಲ್ಲಿಜಾಗೃತಿ ಮೂಡಿಸಿ ಮುಖ್ಯವಾಹಿನಿಗೆ ತಂದಾಗ ಮಾತ್ರ ಪ್ರತಿಯೊಂದು ಕುಟುಂಬಗಳು ಆರ್ಥಿಕವಾಗಿ ಸಶಕ್ತವಾಗಲು ಸಾಧ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ನಾಲ್ಕರ ಕ್ರಾಸ್ ಬಳಿಯ ವ್ಯಸನಮುಕ್ತ ಕೇಂದ್ರದ ಸಭಾಭವನದಲ್ಲಿಶನಿವಾರ ರೋಶನಿ ಸಮಾಜ ಸೇವಾ ಸಂಸ್ಥೆ ಹಾಗೂ ಆದರ್ಶ ತಾಲೂಕು ಮಹಿಳಾ ಒಕ್ಕೂಟದ ಆಶ್ರಯದಲ್ಲಿಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ವರ್ಷಗಳಲ್ಲಿಮಹಿಳೆಯರು ಶಿಕ್ಷಣ, ರಾಜಕೀಯ, ವಿಜ್ಞಾನ, ಕ್ರೀಡೆ, ಉದ್ಯಮ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲಿಸಹ ಉತ್ತಮ ಸಾಧನೆ ತೋರುತ್ತಿದ್ದಾರೆ. ಮಹಿಳೆಯರನ್ನು ಆರ್ಥಿಕವಾಗಿ ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಆರ್ಥಿಕ ನೆರವು ಕಲ್ಪಿಸುತ್ತಿದೆ ಎಂದರು.
ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಪರಿಮಳಾ ಜೈನ್ ಮಾತನಾಡಿ, ಮನೆಗೆ ತಾಯಿ ಬೆಳಕಾದರೆ ಸಮಾಜಕ್ಕೆ ಮಹಿಳೆ ಬೆನ್ನೆಲುಬು. ಮಹಿಳೆಯರ ಹಕ್ಕುಗಳು, ಸಮಾನತೆ ಮತ್ತು ಗೌರವಕ್ಕಾಗಿ ಮಹಿಳಾ ದಿನ ಆಚರಿಸಲಾಗುತ್ತಿದೆ ಎಂದರು. ಸಿಸ್ಟರ್ ಸ್ಟೆಲ್ಲಾಸಲ್ಡಾನ್ಹಾ ಅಧ್ಯಕ್ಷತೆ ವಹಿಸಿದ್ದರು. ಅನಿತಾ ಡಿಸೋಜಾ, ಗಂಗಾ ಗೋಣಿಬಸಣ್ಣನವರ, ಎನ್ .ಎಂ.ಪೂಜಾರ, ಹನುಮಂತಪ್ಪ ಮರಗಡಿ ಇತರರಿದ್ದರು.
ಚಿತ್ರ: 07ಎಚ್ ಜಿಎಲ್ 2
ಹಾನಗಲ್ಲತಾಲೂಕಿನ ನಾಲ್ಕರ ಕ್ರಾಸ್ ಬಳಿಯ ವ್ಯಸನಮುಕ್ತ ಕೇಂದ್ರದ ಸಭಾಭವನದಲ್ಲಿಶನಿವಾರ ಆಯೋಜಿಸಿದ್ದವಿಶ್ವ ಮಹಿಳಾ ದಿನಾಚರಣೆಯನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.

