ಬೆಂಗಳೂರು: ಕಾಂತಾರ ಚಾಪ್ಟರ್ -1 ಚಿತ್ರದ ಚಾಮುಂಡಿ ದೈವಪಾತ್ರವನ್ನು ಹೆಣ್ಣು ದೆವ್ವ ಎಂದು ಕರೆದು ಅಪಹಾಸ್ಯ ಮಾಡಿದ ಪ್ರಕರಣದಲ್ಲಿ
ತಮ್ಮ ವಿರುದ್ಧ ದಾಖಲಾಗಿರುವ ದೂರು ರದ್ದತಿ ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸರಕಾರಕ್ಕೆ ಕೊನೆಯ
ಅವಕಾಶ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ನಗರದ ಮ್ಯಾಜಿಸ್ಪ್ರೇಟ್ ಕೋರ್ಟ್ ನಲ್ಲಿದಾಖಲಾಗಿರುವ ಖಾಸಗಿ ದೂರು ಹಾಗೂ ಹೈಗ್ರೌಂಡ್ಸ್
ಠಾಣೆ ಪೊಲೀಸರು ದಾಖಲಿಸಿರುವ ಎಫ್ ಐಆರ್ ರದ್ದು ಕೋರಿ ರಣವೀರ್ ಸಿಂಗ್
ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ಸೋಮವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
ಅವರಿದ್ದ ಏಕಸದಸ್ಯ ಪೀಠದ ಮುಂದೆ
ವಿಚಾರಣೆಗೆ ಬಂದಿತ್ತು. ಪ್ರಕರಣದ ಖಾಸಗಿ ದೂರುದಾರರಾದ ಪ್ರಶಾಂತ್ ಮೆತಾಲ್ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದರು. ಆದರೆ, ಹೈಗ್ರೌಂಡ್ಸ್ ಪೊಲೀಸರ ಪರ ರಾಜ್ಯ ಹೆಚ್ಚುವರಿ ಸರಕಾರಿ ಅಭಿಯೋಜಕ ಬಿ.ಎನ್ .ಜಗದೀಶ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ
ನೀಡುವಂತೆ ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಧಿ‘ಇದೇ ಕೊನೆಯ ಅವಕಾಶ,ಧಿ’ಧಿ’ ಎಂದು ತಿಳಿಸಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿತು. ಹಾಗೆಯೇ, ಅರ್ಜಿಯ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದೆಂದು ಪೊಲೀಸರಿಗೆ ಸೂಚಿಸಿ, ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿತು.

