ಬೆಂಗಳೂರು: ಮುಡಾ ನಿವೇಶನಗಳ ಹಂಚಿಕೆಯಲ್ಲಿಅಕ್ರಮ ಆರೋಪ ಸಂಬಂಧ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್ ಎ) ಅಡಿ ದಾಖಲಿಸಿರುವ ಪ್ರಕರಣ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ಪ್ರಶ್ನಿಸಿ ದಿನೇಶ್ ಕುಮಾರ್ ಸಲ್ಲಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಸಂದೇಶ್ ಚೌಟ, ‘‘ಜಾರಿ ನಿರ್ದೇಶನಾಲಯವು ಯಾವುದೇ ಜನಪ್ರತಿನಿಧಿ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ‘ಬಿಧಿ’ ವರದಿ ಸಲ್ಲಿಕೆಯಾಗಿದ್ದು, ಅದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ. ಇಲ್ಲಿಪ್ರಕರಣದ ವಿಚಾರಣೆ ನಡೆಸುವ ವ್ಯಾಪ್ತಿಯ ವಿಚಾರವಿದೆ. ಹಾಗಾಗಿ, ವಾದಿಸಲು ಒತ್ತಾಯ ಮಾಡದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು,’’ ಎಂದರು. ಜಾರಿ ನಿರ್ದೇಶನಾಲಯವಧಿನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ್ ಕಾಮತ್ , ‘‘ಈ ಹಿಂದೆ ಸುಪ್ರೀಂಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಪ್ರಕರಣ ಮುಂದುವರಿಯಲು ಕೆಲವು ಸಂದರ್ಭದಲ್ಲಿಅವಕಾಶ ಕಲ್ಪಿಸಿದೆ.
ಈ ಸಂಬಂಧಿತ ತೀರ್ಪುಗಳನ್ನಿಟ್ಟು ವಾದಿಸಲು ಕಾಲಾವಕಾಶ ನೀಡಬೇಕು. ಅಲ್ಲಿಯವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ಮುಂದೂಡುಧಿವಂತೆ ನಿರ್ದೇಶಿಸಬಹುದು,’’ ಎಂದು ಕೋರಿದರು. ಅದನ್ನು ಆಲಿಸಿದ ನ್ಯಾಯಪೀಠ, ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ಇ.ಡಿ. ದಾಖಲಿಸಿರುವ
ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವನ್ನು ಮುಂದಿನ ವಿಚಾರಣೆವರೆಗೆ ನಿರ್ಬಂಧಿಸಿ ವಿಚಾರಣೆಯನ್ನು ಮಾ.26ಕ್ಕೆ ಮುಂದೂಡಿತು.

