ಪಡುಬಿದ್ರಿ ಬಂಟರ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆ
ವಿಕ ಸುದ್ದಿಲೋಕ ಪಡುಬಿದ್ರಿ
ಜಗತ್ತನ್ನು ಮಹಿಳೆಯ ದೃಷ್ಠಿಯಿಂದ ಗೌರವಿಸಿದರೆ ಸಮಗ್ರ ಸಮಸ್ಯೆಗೆ ಪರಿಹಾರ ದೊರೆತಂತಾಗುತ್ತದೆ ಎಂದು ನಮ್ಮ ಕುಡ್ಲಚಾನೆಲ್ ನಿರೂಪಕಿ ಡಾ.ಪ್ರಿಯಾ ಹರೀಶ್ ಹೇಳಿದರು.
ಪಡುಬಿದ್ರಿ ಬಂಟರ ಸಂಘದ ಮಹಿಳಾ ವಿಭಾಗ, ಯುವ ವಿಭಾಗ ಮತ್ತು ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಆಶ್ರಯದಲ್ಲಿಭಾನುವಾರ ಸಂಜೆ ಪಡುಬಿದ್ರಿ ಬಂಟರ ಭವನದಲ್ಲಿನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಸಮಾರಂಭವನ್ನು ಉದ್ಘಾಟಿಸಿದ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಮನೆಯ ಯಾವುದೇ ಜಟಿಲ ಸಮಸ್ಯೆ ಇದ್ದರೂ ಅದನ್ನು ಮಹಿಳೆಯ ಸುಲಲಿತವಾಗಿ ಬಗೆಹರಿಸುತ್ತಾರೆ. ಪ್ರಬಲ ಮಹಿಳಾ ಶಕ್ತಿ ಮುನ್ನಲೆಗೆ ಬರುವುದು ಅತ್ಯವಶ್ಯಕವಾಗಿದೆ ಎಂದರು.
ಸನ್ಮಾನ: ಮಹಿಳಾ ದಿನಾಚರಣೆ ಅಂಗವಾಗಿ ಅಂತಾರಾಷ್ಟ್ರೀಯ ಕ್ರೀಡಾಪಟು ಬಬಿತಾ ಜೆ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಪಡುಬಿದ್ರಿ ಬಂಟರ ಸಂಘದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರನ್ನು ಮಹಿಳಾ ವಿಭಾಗ ಮತ್ತು ಯುವ ವಿಭಾಗದ ವತಿಯಿಂದ ಗೌರವಿಸಲಾಯಿತು.
ಶೈಕ್ಷಣಿಕ ಸಾಧಕರಾಗಿ ಸಂಶೋಧನಾತ್ಮಕ ಗ್ರಂಥಗಳಿಗೆ ಪಿಎಚ್ ಡಿ ಪದವಿ ಪಡೆದ ಸಂಘದ ಸದಸ್ಯೆಯರಾದ ಡಾ.ಶ್ವೇತಾ ಶರತ್ ಶೆಟ್ಟಿ ಪುಚ್ಚೊಟ್ಟುಬೀಡು ಮತ್ತು ಡಾ.ಭ್ರಾಹ್ಮರಿ ಅವಿನಾಶ್ ಶೆಟ್ಟಿ ಪಡುಹಿತ್ಲುಅವರನ್ನು ಸನ್ಮಾನಿಸಲಾಯಿತು. ಮಹಿಳೆಯರಿಗಾಗಿ ಹಮ್ಮಿಕೊಂಡ ನಾನಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಪಡುಬಿದ್ರಿ ಬಂಟರ ಸಂಘದ ಉಪಾಧ್ಯಕ್ಷ ಸಂತೋಷ್ ಶೆಟ್ಟಿ ಪಲ್ಲವಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ಡಾ.ವೈ.ಎನ್ .ಶೆಟ್ಟಿ, ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಯುವ ವಿಭಾಗದ ಅಧ್ಯಕ್ಷ ಸುಜಿತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯದರ್ಶಿ ಸುಶ್ಮಿತಾ ಮಿಥುನ್ ಶೆಟ್ಟಿ ಪದ್ರ, ಕೋಶಾಧಿಕಾರಿ ಲತಾ ಪಿ.ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಜ್ಯೋತಿ ಶೆಟ್ಟಿ ಎರ್ಮಾಳು, ಸುರೇಖಾ ಸುರೇಶ್ ಶೆಟ್ಟಿ ಮತ್ತು ಅನೂಷಾ ನಯೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಫೋಟೋ:09ಎಚ್ ಕೆ1
ಕ್ಯಾ: ಮಹಿಳಾ ದಿನಾಚರಣೆ ಅಂಗವಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಬಬಿತಾ ಜೆ.ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

