(ಜಾಹಿರಾತುದಾರರ ಸುದ್ದಿ)
ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕೋಲಾರ: ತಾಲೂಕಿನ ವಕ್ಕಲೇರಿ ಸಮೀಪದ ಜವಾಹರ್ ನವೋದಯ ವಿದ್ಯಾ ಸಂಸ್ಥೆಯಲ್ಲಿರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಡಾ.ಸರ್ .ಸಿ.ವಿ.ರಾಮನ್ ಅವರ ಫೋಟೋಗೆ ಪುಷ್ಪಾರ್ಚನೆ ಮಾಡುವ ಮೂಲಕ ಪ್ರಾಂಶುಪಾಲ ಡಾಕ್ಟರ್ ವಿ.ಉಮಾಪತಿ ರೆಡ್ಡಿ ಮತ್ತು ಉಪ ಪ್ರಾಂಶುಪಾಲೆ ಆರ್ .ಉಮಾ ಉದ್ಘಾಟಿಸಿ ರಾಮನ್ ಎಫೆಕ್ಟ್ ಕುರಿತು ವಿಸ್ತಾರವಾಗಿ ಮಾತನಾಡಿದರು. 6ನೇ ತರಗತಿಯಿಂದ ಪ್ರಥಮ ದರ್ಜೆ ಪಿಯುಸಿ ವರೆಗಿನ ಮಕ್ಕಳಿಗೆ ವಿಜ್ಞಾನ ವಸ್ತು ಪ್ರದರ್ಶನದ ಸ್ಪರ್ಧೆ ಏರ್ಪಡಿಸಲಾಯಿತು. ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಪ್ರದರ್ಶನದಲ್ಲಿಎಲ್ಲಾವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು. ವಿಜ್ಞಾನ ಶಿಕ್ಷಕ ಸಂಜಯ್ ಕುಮಾರ್ ನಿರೂಪಣೆ, ಕನ್ನಡ ಶಿಕ್ಷಕ ಪ್ರಕಾಶ್ ಸ್ವಾಗತ, ಹಾಗೂ ವಿಶ್ವನಾಥ್ ವಂದನಾರ್ಪಣೆ ನೆರವೇರಿಸಿದರು.
ಫೋಟೋ: (2ಕೆಪಿಎಚ್ 3)
=
ಕೈವಾರತಾತಯ್ಯ ಜಯಂತಿ, ಮೆರವಣಿಗೆ ಇಂದು
ಕೋಲಾರ: ಶ್ರೀ ಯೋಗಿ ನಾರೇಯಣ ಯತೀಂದ್ರರ ಜಯಂತಿ ಅಂಗವಾಗಿ ನಗರದ ಶ್ರೀ ವೇಣುಗೋಪಾಲಸ್ವಾಮಿ ಪುಷ್ಕರಣಿ ಬಳಿಯಿಂದ ಮಾ.3ರ ಬೆಳಗ್ಗೆ 10 ಗಂಟೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿಆಯೋಜಿಸಲಾಗಿದೆ. ಜಿಲ್ಲಾಉಸ್ತುವಾರಿ ಸಚಿವ ಬೈರತಿ ಸುರೇಶ್ ಉದ್ಘಾಟಿಸುವರು. ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
=
ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮ
ಕೋಲಾರ: ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್ ಗಳು ಹಾಗೂ ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥತ್ರ್ಯ ಇಲಾಖೆ, ವಿಕಲಚೇನತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯ ನಾನಾ ಕೈಗಾರಿಕೆಗಳು ಮತ್ತು ನಾನಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿಜಿಲ್ಲೆಯ ವಿಶೇಷಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನಗಳ ಸಾಂಕೇತಿಕ ವಿತರಣಾ ಕಾರ್ಯಕ್ರಮವನ್ನು ಮಾ. 4ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಉಸ್ತುವಾರಿ ಸಚಿವ ಬೈರತಿ ಸುರೇಶ್ ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಡಾ.ಕೊತ್ತೂರು ಜಿ.ಮಂಜುನಾಥ್ ವಹಿಸುವರು.
=
ನೇಮಕಾತಿ ಆದೇಶ
ಕೋಲಾರ: ಜಿಲ್ಲೆಯ 6 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿಬರುವ ಅಂಗನವಾಡಿ ಕೇಂದ್ರಗಳಲ್ಲಿಖಾಲಿ ಇದ್ದ 78 ಅಂಗನವಾಡಿ ಕಾರ್ಯಕರ್ತೆ ಮತ್ತು 378 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಲಾಗಿತ್ತು. ಪ್ರಸ್ತುತ ಅಂತಿಮವಾಗಿ ಆಯ್ಕೆಯಾಗಿರುವ 59 ಅಂಗನವಾಡಿ ಕಾರ್ಯಕರ್ತೆ ಹಾಗೂ 226 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ಮಾರ್ಚ್ 4 ರಂದು ಜಿಲ್ಲಾಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿನಡೆಯುವ ಕಾರ್ಯಕ್ರಮದಲ್ಲಿಆದೇಶಗಳನ್ನು ವಿತರಣೆ ಮಾಡುತ್ತಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

