ವೀರಶೈವ ಸಮಾಜದ ತಾಲೂಕು ಯುವ ಘಟಕದ ಅಧ್ಯಕ್ಷ ಕಿರಣ್ ಕುಮಾರ್ ಸಹಲೆ
ವಿಕ ಸುದ್ದಿಲೋಕ ಸೋಮವಾರಪೇಟೆ
ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಕಾರ್ಯಕ್ರಮಗಳು ಹೆಚ್ಚು ಹೆಚ್ಚಾಗಿ ನಡೆಯಬೇಕೆಂದು ವೀರಶೈವ ಸಮಾಜದ ತಾಲೂಕು ಯುವ ಘಟಕದ ಅಧ್ಯಕ್ಷ ಡಿ.ವಿ.ಕಿರಣ್ ಕುಮಾರ್ ಹೇಳಿದರು.
ಇಲ್ಲಿನ ಎಸ್ ಜೆಎಂ ಶಾಲೆಯಲ್ಲಿನಡೆದ ಅಂತಾರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘‘ಇಂದು ಹೆಚ್ಜಿನ ಸರಕಾರಿ ಶಾಲೆಗಳು ಬಾಗಿಲು ಮುಚ್ಚುತ್ತಿದ್ದು,ಅವುಗಳನ್ನು ಉಳಿಸುವ ಕೆಲಸ ನಮ್ಮಿಂದ ಆಗಬೇಕಿದೆ. ದೇಶದಲ್ಲಿಸಾಕಷ್ಟು ಸಾಧಕರು ಸರಕಾರಿ ಶಾಲೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಾರೆ.ಸರಕಾರಿ ಶಾಲೆಗಳ ಉಳಿವಿಗೆ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಂಡು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತಿದೆ. ಆದರೆ, ಹೆಚ್ಚಿನ ಪೋಷಕರು ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದರಿಂದ ಸರಕಾರಿ ಶಾಲೆಗಳಲ್ಲಿವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಗಲ್ಲಿಉತ್ತಮ ಶಿಕ್ಷಣ ನೀಡುವುದರೊಂದಿಗೆ, ಇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸರಕಾರಿ ಶಾಲಾ ಉಳಿವಿಗೆ ಶಿಕ್ಷಕರು ಹಾಗೂ ಪೋಷಕರು ಮುಂದಾಗಬೇಕು,’’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಎಚ್ .ಮಾರಪ್ಪ ವಹಿಸಿದ್ದರು. ವೇದಿಕೆಯಲ್ಲಿಸಾಹಿತಿ ನ.ಲ. ವಿಜಯ, ಮೋಟಾರ್ ಯೂನಿಯನ್ ಉಪಾಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಮಣಿ ಕುಶಾಲಪ್ಪ, ಶಾಲಾ ಸಹ ಶಿಕ್ಷಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿವಿದ್ಯಾರ್ಥಿನಿಯರಾದ ಕೆ.ಎ. ಸುಕನ್ಯಾ ಪ್ರಥಮ, ಕೆ.ಎ. ಆರ್ಯ ದ್ವಿತೀಯ, ಎಸ್ .ಕೆ. ಶ್ರೇಯ ಮೂರನೇ ಹಾಗೂ ಕೆ.ಕೆ. ರಾಜೇಶ್ವರಿ ನಾಲ್ಕನೇ ಬಹುಮಾನ ಪಡೆದರು.
ಎಂಡಿಕೆ28ಎಸ್ ಪಿಟಿ01: ಸೋಮವಾರಪೇಟೆ ಎಸ್ ಜೆಎಂ ಶಾಲೆಯಲ್ಲಿನಡೆದ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಸಾಹಿತಿ ನ.ಲ.ವಿಜಯ ವಿತರಿಸಿದರು.

